ಮೊದಲ ಪತ್ನಿಗೆ ವಂಚನೆ: ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಬಂಧನ

Date:

ಮೊದಲ ಪತ್ನಿಗೆ ವಂಚನೆ: ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಬಂಧನ

ಬೆಂಗಳೂರು: ಮೊದಲ ಪತ್ನಿಗೆ ವಂಚಿಸಿ ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜೆಡ್ರೆಲಾ ಜಬ್ ಆರೂಪ್ ಎಂದು ಗುರುತಿಸಲಾಗಿದೆ. ಡಿಸಿಆರ್‌ಇ ಪಶ್ಚಿಮ ವಿಭಾಗ ಪೊಲೀಸ್ ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಆರೋಪಿ ಪತ್ನಿಯೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದ. ಪತ್ನಿ ಖಾಸಗಿ ಸಂಸ್ಥೆಯೊಂದರಲ್ಲಿ ಪ್ರತಿಷ್ಠಿತ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದರು. ಟೆಕ್ಕಿಯಾಗಿದ್ದ ಪತಿಗೆ ಕೆಲಸ ಇಲ್ಲದ ಹಿನ್ನೆಲೆ, ಪತ್ನಿ ಲಕ್ಷಾಂತರ ರೂ. ಸಂಬಳದ ಕೆಲಸವನ್ನು ಬಿಟ್ಟುಕೊಟ್ಟು ಪತಿಯನ್ನು ಅವಲಂಬಿಸಿದ್ದರು.

ಮಗು ಜನಿಸಿದ ಬಳಿಕ ಪತ್ನಿಗೆ ಜಾತಿ ನಿಂದನೆ ಸೇರಿದಂತೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲು ಆರೋಪಿ ಆರಂಭಿಸಿದ್ದಾನೆ ಎನ್ನಲಾಗಿದೆ. ಅಲ್ಲದೆ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಡ ಹಾಕಿ ಹಲ್ಲೆ ನಡೆಸಿದ್ದಾನೆ ಎಂಬ ಆರೋಪವೂ ಇದೆ. ಕಿರುಕುಳ ತಾಳಲಾರದೇ ಪತ್ನಿ ಪತಿಯ ವಿರುದ್ಧ ಅಟ್ರಾಸಿಟಿ ಮತ್ತು ಹಲ್ಲೆ ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಪತ್ನಿ ನೀಡಿದ ಮಾಹಿತಿ ಆಧರಿಸಿ ಪ್ರೇಯಸಿಯ ಮನೆಗೆ ತೆರಳಿ ಆರೋಪಿ ಜಾಕೂಬ್‌ನನ್ನು ಬಂಧಿಸಿದ್ದಾರೆ. ಕರ್ನಾಟಕದಲ್ಲಿ ಡಿಸಿಆರ್‌ಇ ಪೊಲೀಸ್ ಠಾಣೆ ಜಾರಿಗೆ ಬಂದ ಬಳಿಕ ಅಟ್ರಾಸಿಟಿ ಪ್ರಕರಣದಲ್ಲಿ ನಡೆದ ಮೊದಲ ಬಂಧನ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾಡಾನೆ ದಾಳಿ: ಸಕಲೇಶಪುರದಲ್ಲಿ ಮಹಿಳೆ ಸಾವು, ಸಚಿವ ಈಶ್ವರ ಖಂಡ್ರೆ ತೀವ್ರ ಶೋಕ

ಕಾಡಾನೆ ದಾಳಿ: ಸಕಲೇಶಪುರದಲ್ಲಿ ಮಹಿಳೆ ಸಾವು, ಸಚಿವ ಈಶ್ವರ ಖಂಡ್ರೆ ತೀವ್ರ...

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ ಬೆಂಗಳೂರು: ಗ್ರೇಟರ್...

ಎಐ ಯುವತಿಯ ಮೋಹಕ್ಕೆ ಬಿದ್ದು 1.53 ಲಕ್ಷ ರೂ. ಕಳೆದುಕೊಂಡ ಯುವಕ.!

ಎಐ ಯುವತಿಯ ಮೋಹಕ್ಕೆ ಬಿದ್ದು 1.53 ಲಕ್ಷ ರೂ. ಕಳೆದುಕೊಂಡ ಯುವಕ.! ಬೆಂಗಳೂರು:...

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ ಬೆಂಗಳೂರು:...