ಈ ಹಿಂದೆ ಕೇಂದ್ರ ಸರ್ಕಾರ, ಬ್ಯಾಂಕ್ ಖಾತೆ ತೆರೆಯಲು, ಮೊಬೈಲ್ ಫೋನ್ ಸಂಪರ್ಕ ಪಡೆಯಲು ಸೇರಿದಂತೆ ವಿವಿಧ ಸೌಲಭ್ಯಗಳಿಗೆ ಆಧಾರ್ ಕಡ್ಡಾಯಗೊಳಿಸಿತ್ತು. ಆದರೆ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಕೆಲವೊಂದು ಸೇವೆಗಳಿಗೆ ಆಧಾರ್ ನಿಂದ ವಿನಾಯಿತಿ ನೀಡಲಾಗಿತ್ತು.
ಆದರೆ ಇದೀಗ ಆಧಾರ್ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಇದನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲು ಸಿದ್ಧತೆ ನಡೆಸಲಾಗಿದೆ. ಇದು ಸಂಸತ್ನಲ್ಲಿ ಅಂಗೀಕಾರಗೊಂಡರೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್ ಸಂಪರ್ಕ ಪಡೆದುಕೊಳ್ಳಲು ಆಧಾರ್ ಗುರುತಿನ ಚೀಟಿ ಸಲ್ಲಿಸುವುದು ಕಡ್ಡಾಯವಾಗಲಿದೆ.
ಇದರ ಜೊತೆಗೆ ಆಧಾರ್ ಮಾಹಿತಿಗಳನ್ನು ಬಹಿರಂಗಗೊಳಿಸುವ ಮೂಲಕ ವ್ಯಕ್ತಿಯ ಖಾಸಗಿತನಕ್ಕೆ ಧಕ್ಕೆ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸುವ ಅವಕಾಶವನ್ನು ಮಸೂದೆಯಲ್ಲಿ ಸೇರ್ಪಡೆ ಮಾಡಲಾಗಿದ್ದು, ನಿಬಂಧನೆಗಳನ್ನು ಉಲ್ಲಂಘಿಸುವವರಿಗೆ 1 ಕೋಟಿ ರೂ.ದಂಡ ವಿಧಿಸಲಾಗುತ್ತದೆ.