ಮೊಮ್ಮಕ್ಕಳಿಗೆ ಕ್ಷೇತ್ರ ದಾನ ಮಾಡಿದ ದೇವೇಗೌಡರ ಗತಿ ಇಂದು ಏನಾಗಿದೆ ಗೊತ್ತಾ..?

Date:

ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆ ಎದುರಿಸುವ ಕಾಂಗ್ರೆಸ್-ಜೆಡಿಎಸ್ ಪಕ್ಷಕ್ಕೆ ಸೀಟು ಹಂಚಿಕೆಯೇ ಸವಾಲಾಗಿದೆ. ತುಮಕೂರು ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಅಂತಿಮಗೊಳಿಸಲು ಇನ್ನೂ ಹಗ್ಗಜಗ್ಗಾಟ ನಡೆದಿದೆ.

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಕಾಂಗ್ರೆಸ್ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಆದರೆ ತುಮಕೂರು ಕ್ಷೇತ್ರದ ಹಾಲಿ ಸಂಸದ ಮುದ್ದಹನುಮೇಗೌಡ ಅವರು ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿದ್ದಾರೆ.

ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಜೆಡಿಎಸ್‌ ಪಾಲಿಗಾಗಿರುವ ತುಮಕೂರು ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಮುದ್ದಹನುಮೇಗೌಡ ಅವರು ಕಾಂಗ್ರೆಸ್ ಪಕ್ಷದಿಂದ ನಾನು ನಾಮಪತ್ರ ಸಲ್ಲಿಸಿಯೇ ಸಿದ್ಧ ಎಂದು ಸವಾಲು ಹಾಕಿದ್ದಾರೆ. ಇದು ದೇವೇಗೌಡ ಅವರಿಗೆ ಆತಂಕ ತಂದೊಡ್ಡಿದೆ.

ಸೋಮವಾರ ನಾನು ತುಮಕೂರಿನ ಬಿಜಿಎಸ್ ವೃತ್ತದಿಂದ 11 ಗಂಟೆಗೆ ಮೆರವಣಿಗೆಯಲ್ಲಿ ತೆರಳಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ’ ಎಂದು ಹೇಳಿದರು. ಕಾಂಗ್ರೆಸ್ ಟಿಕೆಟ್ ಸಿಗಲಿಲ್ಲವೆಂದರೆ ‘ಜನತಾ ನ್ಯಾಯಾಲಯಕ್ಕೆ’ ಹೋಗುವುದಾಗಿ ಅವರು ಹೇಳಿದ್ದರು. ಕಾಂಗ್ರೆಸ್ ಟಿಕೆಟ್ ಸಿಗಲಿ ಸಿಗದೇ ಇರಲಿ ಮುದ್ದಹನುಮೇಗೌಡ ಅವರು ಚುನಾವಣೆಗೆ ಸ್ಪರ್ಧಿಸುವ ನಿರ್ಧಾರ ಮಾಡಿದ್ದಾರೆ.

ಇದರ ಬೆನ್ನಲ್ಲೇ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ತುಮಕೂರು ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಆದರೆ ಈಗ ಮುದ್ದಹನುಮೇಗೌಡ ಅವರು ಕಣಕ್ಕೆ ಇಳಿದಿರುವುದು ದೇವೇಗೌಡ ಅವರಿಗೆ ಆತಂಕ ತಂದಿದೆ. ಮುದ್ದಹನುಮೇಗೌಡ ಅವರಿಗೆ ತುಮಕೂರಿನಲ್ಲಿ ಉತ್ತಮ ಜನ ಬೆಂಬಲ ಇದ್ದು, ಉಪಮುಖ್ಯಮಂತ್ರಿ ಪರಮೇಶ್ವರ್ ಸೇರಿದಂತೆ ಹಲವು ಪ್ರಮುಖ ಮುಖಂಡರು ಅವರ ಪರ ಇದ್ದಾರೆ ಇದು ಮೈತ್ರಿ ಮಾಡಿಕೊಂಡ ಎರಡು ಪಕ್ಷಗಳಿಗೆ ಬಿಸಿತುಪ್ಪವಾಗಿದೆ.

ಇತ್ತ ಕಡೆ ಕಾಂಗ್ರೆಸ್ ನಾಯಕರ ನಡೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಸಮಾಧಾನಗೊಂಡಿದ್ದಾರೆ. ‘ನಿಮ್ಮ ಸ್ಥಳೀಯ ನಾಯಕರಿಗೆ ಬುದ್ಧಿ ಹೇಳಿ’ ಎಂದು ದಿನೇಶ್ ಗುಂಡೂರಾವ್ ಮತ್ತು ಜಮೀರ್ ಅಮಹದ್ ಖಾನ್ ಅವರಿಗೆ ಹೇಳಿದ್ದಾರೆ.

 

Share post:

Subscribe

spot_imgspot_img

Popular

More like this
Related

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...