ಮೋಕ್ಷಜ್ಞ‌ ಮೊದಲ ಚಿತ್ರಕ್ಕೆ ಹನುಮಾನ್ ಡೈರೆಕ್ಷರ್ !

Date:

ತೆಲುಗು ಚಿತ್ರರಂಗದ ನಂದಮೂರಿ ಕುಟುಂಬದಿಂದ ಮತ್ತೊಂದು ಕುಡಿ ಸಿನಿರಂಗ ಪ್ರವೇಶಿಸಿದೆ. ನಂದಮೂರಿ ತಾರಕ್ ರಾಮ್ ಮೊಮ್ಮಗ ಹಾಗೂ ಬಾಲಕೃಷ್ಣ ಅವರ ಪುತ್ರ ಮೋಕ್ಷಜ್ಞ ತಾತ-ತಂದೆಯಂತೆ ಚಿತ್ರರಂಗದಲ್ಲಿ ಹೆಸರು ಮಾಡುವ ಉತ್ಸಾಹದಿಂದ ಬಣ್ಣ ಹಚ್ಚಿದ್ದಾರೆ.


ನಂದಮೂರಿ ಬಾಲಕೃಷ್ಣ ಪುತ್ರ ನಂದಮೂರಿ ಮೋಕ್ಷಜ್ಞ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ನಿನ್ನೆ ಅವರ ಹುಟ್ಟುಹಬ್ಬದಂದು ಅವರ ಹೊಸ ಸಿನಿಮಾದ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಲಾಗಿದೆ. ಸ್ಟೈಲೀಶ್ ಲುಕ್ ನಲ್ಲಿ ಮೋಕ್ಷಜ್ಞ ಕಾಣಿಸಿಕೊಂಡಿದ್ದು, ಬಾಲಯ್ಯ ಪುತ್ರನ ಎಂಟ್ರಿಯನ್ನು ಅಭಿಮಾನಿಗಳು ಸ್ವಾಗತಿಸಿದ್ದಾರೆ.

ಮೋಕ್ಷಜ್ಞ ಹೊಸ ಸಿನಿಮಾವನ್ನು ‘ಹನುಮ್ಯಾನ್’ ಸಿನಿಮಾದ ನಿರ್ದೇಶಕ ಪ್ರಶಾಂತ್ ವರ್ಮಾ ನಿರ್ದೇಶನ ಮಾಡುತ್ತಿದ್ದಾರೆ. SLV ಸಿನಿಮಾಸ್ ಹಾಗೂ ಲೆಜೆಂಡ್ ಪ್ರೊಡಕ್ಷನ್ ಬ್ಯಾನರ್ ನಡಿ
ದಸರಾ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ಕೊಟ್ಟಿದ್ದ ನಿರ್ಮಾಪಕ ಸುಧಾಕರ್ ಚೆರುಕುರಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಎಂ ತೇಜಸ್ವಿನಿ ನಂದಮೂರಿ ಚಿತ್ರ ಪ್ರೆಸೆಂಟ್ ಮಾಡುತ್ತಿದ್ದಾರೆ.

 

ಈ ಸಿನಿಮಾ ಬಗ್ಗೆ ಮಾತನಾಡಿರುವ ನಿರ್ದೇಶಕ ಪ್ರಶಾಂತ್ ವರ್ಮಾ, ಮೋಕ್ಷಜ್ಞ ಅವರನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿರುವುದು ನನಗೆ ದೊಡ್ಡ ಜವಾಬ್ದಾರಿಯಾಗಿದೆ. ಬಾಲಯ್ಯ ಅವರು ನನ್ನ ಮೇಲೆ ಹಾಗೂ ಕಥೆ ಮೇಲೆ ನಂಬಿಕೆ ಇಟ್ಟು ಈ ಜವಾಬ್ದಾರಿ ಕೊಟ್ಟಿದ್ದಾರೆ. ಇದಕ್ಕಾಗಿ ಬಾಲಯ್ಯ ಅವರಿಗೆ ಕೃತಜ್ಞನಾಗಿರುತ್ತೇನೆ. ಈ ಕಥೆ ಇತಿಹಾಸದಿಂದ ಸ್ಫೂರ್ತಿ ಪಡೆದಿದೆ. ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ನ ಒಂದು ಭಾಗವಾಗಿದೆ ಎಂದಿದ್ದಾರೆ.

ಬಾಲಯ್ಯ ಪುತ್ರ ಮೋಕ್ಷಜ್ಞ ಯಾವಾಗ ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಾರೆ? ಅವರನ್ನು ಲಾಂಚ್ ಮಾಡುವ ನಿರ್ದೇಶಕ ಯಾರು ಎಂಬ ಪ್ರಶ್ನೆಗಳು ಹಲವು ವರ್ಷಗಳಿಂದ ಕೇಳಿ ಬರುತ್ತಲೇ ಇದ್ದವು. ಇದೀಗ ‘ಹನುಮಾನ್’ ಸಿನಿಮಾದ ಮೂಲಕ ಪ್ರಶಾಂತ್, ತಮ್ಮದೇ ಒಂದು ಸಿನಿಮ್ಯಾಟಿಕ್ ಯೂನಿವರ್ಸ್‌ ಅನ್ನು ಕ್ರಿಯೆಟ್ ಮಾಡಿಕೊಂಡಿದ್ದಾರೆ. ನಂದಮೂರಿ ಮೋಕ್ಷಜ್ಞ ಸಿನಿಮಾ ಕೂಡ ಅದೇ ಸಿನಿಮ್ಯಾಟಿಕ್ ಯೂನಿವರ್ಸ್‌ನಲ್ಲಿ ಮೂಡಿಬರಲಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...