ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ವದಂತಿ ಕೆಲವು ದಿನಗಳಿಂದ ಹಬ್ಬಿತ್ತು.
ಇದೀಗ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಚ್ ಡಿ ಕುಮಾರಸ್ವಾಮಿ ಮಂಢ್ಯ ಕ್ಷೇತ್ರದಲ್ಲಿ ಪುತ್ರ ನಿಖಿಲ್ ಕುಮಾರ್ ನಾಮಪತ್ರ ಸಲ್ಲಿಕೆಗೂ ಮುನ್ನ ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.
“ಕರ್ನಾಟಕದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸುವುದಾದರೆ ಸ್ಪರ್ಧಿಸಲಿ “ಮೋದಿಯವರು ಸ್ಪರ್ಧಿಸುವುದಾದರೆ ನಮ್ಮದೇನೂ ಅಭ್ಯಂತರವಿಲ್ಲ ಕರ್ನಾಟಕದಲ್ಲಿ ಸ್ಪರ್ಧೆ ಮಾಡಿದ ಮೇಲಾದರೂ ಅವರಿಗೆ ಈ ರಾಜ್ಯದ ಕಷ್ಟಗಳು ಏನು ಎಂಬುದು ಅರ್ಥವಾಗಬಹುದು” ಎಂದು ಹೇಳಿಕೆಯನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೀಡಿದ್ದಾರೆ.