ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಟ್ವಿಟರ್ ಖಾತೆಯಲ್ಲಿ ಮೋದಿಯ ಮೇಲೆ ಕಿಡಿಕಾರಿದ್ದಾರೆ ,
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರವೇ ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಭದ್ರತಾ ಸಿಬ್ಬಂದಿ ಮತ್ತು ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗಿದ್ದಾರೆ ಎಂದು ದಾಖಲೆಗಳು ಹೇಳುತ್ತಿವೆ. ಇದಕ್ಕೆ ಕಾರಣ ಸಂವಿಧಾನದ 370ನೇ ವಿಧಿಯೇ? ಇಲ್ಲವೇ ಪರಿಸ‍್ಥಿತಿಯನ್ನು ನಿಯಂತ್ರಣ ಮಾಡಲಿಕ್ಕಾಗದ ನಿಮ್ಮ ಅಸಾಮರ್ಥ್ಯವೇ?
ಪಾಕಿಸ್ತಾನದ ವಿರುದ್ಧ ಯುದ್ಧ ಗೆದ್ದಾಗ, ಸ್ವರ್ಣಮಂದಿರದಲ್ಲಿದ್ದ ಉಗ್ರಗಾಮಿಗಳನ್ನು ಖಾಲಿ ಮಾಡಿಸಿದಾಗ ಶ್ರೀಮತಿ ಇಂದಿರಾ ಗಾಂಧಿಯವರು ರಾಜಕೀಯವಾಗಿ ಬಳಸಿಕೊಳ್ಳಲಿಲ್ಲ,ಅದು ತಮ್ಮ ಕರ್ತವ್ಯ ಎಂದು ತಿಳಿದಿದ್ದರು. ಸನ್ಮಾನ್ಯ ಮೋದಿ ಅವರೇ ನೀವ್ಯಾಕೆ ಪ್ರತಿ ಕೆಲಸವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ತಿದ್ದೀರಿ? ಎಂದು ಪ್ರಶ್ನೆ ಮಾಡಿದ್ದಾರೆ.