ನೇರ ಭೇಟಿಗೆ ಸಮಯವನ್ನು ನೀಡುವಂತೆ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. ಅಕ್ಟೋಬರ್ 5 ರಂದು ಪತ್ರವನ್ನು ಬರೆದಿರುವ ಬಸವನಗೌಡ ಪಾಟೀಲ್ ಯತ್ನಾಳ್, ಉತ್ತರ ಕರ್ನಾಟಕದ ನೆರೆ ಪರಿಸ್ಥಿತಿ ಬಗ್ಗೆ ವಿವರ ನೀಡಲು ಮುಖಮುಖಿ ಭೇಟಿಗೆ ಅನುಮತಿ ಕೋರಿದ್ದಾರೆ.
ಆಲಮಟ್ಟಿ ಅಣೆಕಟ್ಟು ಎತ್ತರಿಸುವ ಸಂಬಂಧ ರಾಜೀನಾಮೆ ನೀಡಲು ಮುಂದಾಗಿದ್ದ ವಿಚಾರ ಸಹ ಪ್ರಸ್ತಾಪಿಸಿದ್ದಾರೆ. ಸಂಸದ ಸ್ಥಾನಕ್ಕೆ ರಾಜೀನಾಮೆಗೆ ಮುಂದಾಗಿದ್ದ ಬಗ್ಗೆ ಅವರು ಪ್ರಸ್ತಾಪಿಸಿ ಕೇಂದ್ರೀಯ ಶಿಸ್ತು ಸಮಿತಿ ನೋಟಿಸ್ ಗೆ ಉತ್ತರಿಸುವ ಬದಲು ಪತ್ರ ಬರೆದು ಭೇಟಿಗೆ ಅವಕಾಶ ಕೇಳಿದ್ದಾರೆ.