ಮೋದಿ ಅವರನ್ನ ಮತ್ತೆ ಪ್ರಧಾನಿ ಮಾಡಲು ಎಲ್ಲರು ಒಟ್ಟಾಗಿ ಕೆಲಸ ಮಾಡಬೇಕು !

1 Min Read

ಬೆಂಗಳೂರು: ಯಾರಿಗೆ ಎಷ್ಟೇ ಅಸಮಾಧಾನ ಇದ್ದರೂ ಮೋದಿ ಅವರನ್ನ ಮತ್ತೆ ಪ್ರಧಾನಿ ಮಾಡಲು ಎಲ್ಲರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಮಾಜಿ ಶಾಸಕ ಪ್ರೀತಂಗೌಡ ಪಕ್ಷದ ಅಸಮಾಧಾನಿತರಿಗೆ ಕರೆ ನೀಡಿದ್ದಾರೆ. ಬಿಜೆಪಿಯಲ್ಲಿ ಯತ್ನಾಳ್, ಸೋಮಣ್ಣ ಅಸಮಾಧಾನ ವಿಚಾರಕ್ಕೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು,
ರಾಜಕಾರಣದಲ್ಲಿ ಸೋಮಣ್ಣ, ಯತ್ನಾಳ್ ಹಿರಿಯರಿದ್ದಾರೆ. ಜೆಡಿಎಸ್ ಜೊತೆ ಹೊಂದಾಣಿಕೆ ಆದಾಗ ಎಫೆಕ್ಟ್ ಆದ ಮೊದಲ ವ್ಯಕ್ತಿ ಪ್ರೀತಂಗೌಡ. ಮೋದಿ ಅವರು ಮತ್ತೆ ಪ್ರಧಾನಿ ಆಗಬೇಕು ಅಂತ ಇಚ್ಚೆ ಪಟ್ಟಿದ್ದೇವೆ. ಅದಕ್ಕಾಗಿ ಒಟ್ಟಾಗಿ ಕೆಲಸ ಮಾಡ್ತಿದ್ದೇವೆ. ಅದಕ್ಕೆ ಸೋಮಣ್ಣ, ಯತ್ನಾಳ್ ಹೊರತಲ್ಲ ಎಂದರು.
ಸೋಮಣ್ಣ ಮತ್ತು ಯತ್ನಾಳ್ ಕೂಡ ಮೋದಿ ಪ್ರಧಾನಿಯಾಗಿ ಆಗಬೇಕು ಅಂತ ಹೇಳಿದ್ದಾರೆ. ಕಾಲಕ್ರಮೇಣ ಎಲ್ಲವೂ ಸರಿಯಾಗಲಿದೆ. ಮೋದಿ ಅವರನ್ನ ಪ್ರಧಾನಮಂತ್ರಿ ಮಾಡೋಣ. ಲೋಕಸಭಾ ಚುನಾವಣೆಗೆ ಬಹಳ ಹೆಚ್ಚಿನ ಶಕ್ತಿಯನ್ನು ಸೋಮಣ್ಣ, ಯತ್ನಾಳ್ ಕೂಡ ಮಾಡ್ತಾರೆ. ಸ್ವಲ್ಪ ಅಸಮಾಧಾನ ಇರುತ್ತದೆ. ಎಲ್ಲವೂ ಮುಂದೆ ಸರಿ ಹೋಗಲಿದೆ ಎಂದರು.

Share This Article