ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರದಂದು ರಾಜ್ಯಕ್ಕೆ ಭೇಟಿ ನೀಡಿದ್ದು ಚಿತ್ರದುರ್ಗ ಹಾಗೂ ಮೈಸೂರಿನಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಕುರಿತು ಹೇಳಿರುವ ಮಾತು ಅವರ ಹಿನ್ನಡೆಗೆ ಕಾರಣವಾಗುವ ಸಾಧ್ಯತೆ ಕಂಡುಬರುತ್ತಿದೆ.
ಮೈಸೂರಿನಲ್ಲಿ ಬೃಹತ್ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ್ದ ನರೇಂದ್ರ ಮೋದಿ ಅವರು ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರನ್ನು ಬೆಂಬಲಿಸುವಂತೆ ಮಂಡ್ಯ ಮತದಾರರಲ್ಲಿ ಮನವಿ ಮಾಡಿದ್ದರು. ಜೊತೆಗೆ ಸುಮಲತಾ ಅಂಬರೀಶ್ ಅವರ ಕಾರಣಕ್ಕಾಗಿ ಬಿಜೆಪಿ ಅಲ್ಲಿ ಅಭ್ಯರ್ಥಿಯನ್ನು ಹಾಕಿಲ್ಲವೆಂದು ತಿಳಿಸಿದ್ದರು.
ಈ ವಿಚಾರ ಈಗ ಸುಮಲತಾ ಅಂಬರೀಶ್ ಅವರಿಗೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಕಂಡು ಬರುತ್ತಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದ ಮುಸ್ಲಿಂ ಮತದಾರರು ಸುಮಲತಾ ಅಂಬರೀಶ್ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎನ್ನುವ ಕಾರಣಕ್ಕಾಗಿ ಜೆಡಿಎಸ್ ಬೆಂಬಲಿಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.