ಮುಖ್ಯಮಂತ್ರಿ ಯಡಿಯೂರಪ್ಪ ನವರನ್ನು ಸರ್ವಪಕ್ಷ ನಿಯೋಗ ಕೊಂಡೊಯ್ಯುವಂತೆ ಟ್ವಿಟರ್‍ನಲ್ಲಿ ಆಗ್ರಹಿಸಿರುವ ಕುಮಾರಸ್ವಾಮಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಉದ್ದೇಶಿಸಿ, ನಿಮಗೆ ಹಾಗೂ 25 ಬಿಜೆಪಿಯ ಸಂಸದರಿಗೆ ಪ್ರಧಾನಿ ಜೊತೆ ರಾಜ್ಯದ ನೆರೆ ಪರಿಸ್ಥಿತಿ ಕುರಿತು ಗಟ್ಟಿಯಾಗಿ ಮಾತನಾಡುವ ಧೈರ್ಯವಿಲ್ಲ ಎಂದ್ರೆ ಹೇಳಿ ನಾವು ನಿಮ್ಮ ಜೊತೆ ದೆಹಲಿಗೆ ಬರುತ್ತೇವೆ. ಸರ್ವ ಪಕ್ಷದ ನಿಯೋಗದ ಜೊತೆ ಪ್ರಧಾನಿಯನ್ನು ಭೇಟಿ ಮಾಡೋಣ ಎಂದಿದ್ದಾರೆ.
ರಾಜ್ಯದಲ್ಲಿರುವುದು ತೊಘಲಕ್ ಸರ್ಕಾರ ಮಾತ್ರ ಎಂದುಕೊಂಡಿದ್ದೆ. ಆದರೆ ನಿಮಗೆ ಕೇಳುವ ಧೈರ್ಯವು ಇಲ್ಲ ಎಂದಾದರೆ ಸರ್ವ ಪಕ್ಷಗಳ ನಿಯೋಗ ಕರೆದೊಯ್ಯಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.