No menu items!
5.4 C
Munich
Thursday, April 30, 2026

ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಸಿಎಂ ಕುಮಾರಸ್ವಾಮಿ ಅವರು ಹಾಜರಿರುತ್ತಾರೆ !?

Must read

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ನವದೆಹಲಿಯಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳಲ್ಲಿದ್ದಾರೆ.

ರಾಷ್ಟ್ರದ ಪ್ರಧಾನಿಯಾಗಿ ಮತ್ತೆ ನರೇಂದ್ರ ಮೋದಿ ಅವರು ನಾಳೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

2ನೇ ಅವಧಿಗೆ ಪ್ರಧಾನಮಂತ್ರಿಯಾಗಿ ಮೋದಿ ಅಧಿಕಾರ ಸ್ವೀಕಾರ : ಎಲ್ಲಾ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿ ಕೇಂದ್ರದಲ್ಲಿ ಮತ್ತೆ ಅಭೂತಪೂರ್ವ ಗೆಲುವು ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿ ನಾಳೆ ಎರಡನೇ ಅವಧಿಗೆ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ

ದೆಹಲಿಯ ರಾಷ್ಟ್ರಪತಿ ಭವನದ ಐತಿಹಾಸಿಕ ರೈಸೀನಾ ಹಿಲ್ಸ್ ಮುಂಭಾಗದಲ್ಲಿ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ಸಂಜೆ 7 ಗಂಟೆಗೆ ದೇಶದ ನೂತನ ಪ್ರಧಾನಿಗೆ ರಾಷ್ಟ್ರಪತಿ ರಾಮನಾಥ್‍ಕೋವಿಂದ್ ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ.

ನರೇಂದ್ರ ಮೋದಿಯವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ದೇಶ-ವಿದೇಶಗಳ ಅನೇಕ ಗಣ್ಯರು ಆಗಮಿಸಲಿದ್ದಾರೆ. ರಷ್ಯಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಸೇರಿದಂತೆ ಅನೇಕ ರಾಷ್ಟ್ರಗಳ ರಾಷ್ಟ್ರಾಧ್ಯಕ್ಷರು, ರಾಯಭಾರಿಗಳು ಭಾಗವಹಿಸಲಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article