ಪ್ರಧಾನಿ ಮೋದಿ ವಿರುದ್ಧ ವಾರಣಾಸಿ ಲೋಕಸಭೆ ಕ್ಷೇತ್ರದಲ್ಲಿ ಆಧುನಿಕ ಇಂದಿರಾಗಾಂಧಿ ಎಂದೇ ಬಿಂಬಿಸಿಕೊಂಡಿರುವ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳಿಗೆ ಇಂದು ತೆರೆ ಬಿದ್ದಿದೆ.

ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕಾ ಸ್ಪರ್ಧಿಸಿದರೆ ಕಾಂಗ್ರೆಸ್ ತೀವ್ರ ಪ್ರತಿರೋಧ ನೀಡಬಹುದು ಎಂದು ಅಂದಾಜಿಸಲಾಗಿತ್ತಾದರೂ ಈಗ ವಾರಣಾಸಿಯಿಂದ ಅಜಯ್ ರಾಯ್ ಸ್ಪರ್ಧೆಗಿಳಿದಿದ್ದಾರೆ. ಅಜಯ್ ರಾಯ್ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಅಜಯ್‍ರಾಯ್ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾಗಾಂಧಿ, ನಾನು ವಾರಣಾಸಿ ಕ್ಷೇತ್ರದಿಂದ ಸ್ಪರ್ಧೆಗಿಳಿಯಬೇಕೆಂದು ಬಯಸಿದ್ದೆ, ಆದರೆ ಈಗ ಪಕ್ಷ ಅಜಯ್‍ರಾಯ್‍ಗೆ ಟಿಕೆಟ್ ನೀಡಿದೆ, ನಾನು ಬೇರೆ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ.






