ರಾಜ್ಯದಲ್ಲಿ 25 ಬಿಜೆಪಿ ಸಂಸದರಿದ್ದು, ಎಲ್ಲರಿಗೂ ಸಚಿವ ಸ್ಥಾನದ ಮೇಲೆ ಕಣ್ಣಿದೆ. ಆದರೆ, ರಾಜ್ಯದಲ್ಲಿ ಈಗಾಗಲೇ ಯಾರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ? ಎಂಬ ಲೆಕ್ಕಚಾರಗಳು ಶುರುವಾಗಿದ್ದು, ಜಾತಿ, ಅನುಭವ ಹಾಗೂ ಪ್ರದೇಶಾವಾರು ಮಾನದಂಡಗಳ ಮೇಲೆ ಸಚಿವ ಸ್ಥಾನ ಸಿಗಲಿದೆ ಎಂದು ಅಂದಾಜಿಸಲಾಗಿದ್ದು, ಡಿ.ವಿ.ಸದಾನಂದಗೌಡಗೆ ಮೋದಿ ಸಂಪುಟದಲ್ಲಿ ಸೀಟ್ ಪಕ್ಕಾ ಎಂದು ಹೇಳಲಾಗುತ್ತಿದೆ.
ಡಿ.ವಿ.ಸದಾನಂದಗೌಡರಿಗೆ ಪ್ರಧಾನಿ ಕಾರ್ಯಾಲಯದಿಂದ ಕರೆ ಬಂದಿದ್ದು, ಮೋದಿ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ಬಿಜೆಪಿ ಮಿತ್ರಪಕ್ಷಗಳಿಗೆ ಕೇವಲ ಒಂದೊಂದು ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.