No menu items!
10.3 C
Munich
Saturday, September 12, 2026

ಮೋರಿಯಲ್ಲಿ 2 ವರ್ಷದ ಹೆಣ್ಣು ಮಗುವಿನ ಮೃತದೇಹ ಪತ್ತೆ..!

Must read

ಬೆಂಗಳೂರು:- ಮೋರಿಯಲ್ಲಿ 2 ವರ್ಷದ ಹೆಣ್ಣು ಮಗುವಿನ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಬಳಿಯಲ್ಲಿ ನಡೆದಿದೆ. ಚಾಪೆ ಹಾಕಿ ಮಗುವನ್ನು ಮಲಗಿಸಿದ ರೀತಿಯಲ್ಲಿ ಮಗು ಪತ್ತೆಯಾಗಿದೆ. ಆದರೆ ಮಗುವಿನ ದೇಹದ ಮೇಲೆ ಯಾವುದೇ ಗಾಯದ ಗುರುತು ಕಂಡು ಬಂದಿಲ್ಲ. ಇದು ಕೊಲೆಯೊ ಅಥವಾ ಸಹಜ ಸಾವುವೋ ತಿಳಿದು ಬಂದಿಲ್ಲ.
ಮಗುವಿನ ಮೃತದೇಹ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.

- Advertisement -spot_img

More articles

- Advertisement -spot_img

Latest article