ಪ್ರಧಾನಿ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿ ರಾಜ್ಯೋತ್ಸವದ ಶುಭಾಶಯ ಹೇಳಿದ್ದಾರೆ. ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶುಭಾಶಯ ಕೋರಿದ್ದಾರೆ. ನಾಡಿನ ಭವ್ಯ ಇತಿಹಾಸ, ಪರಂಪರೆಯನ್ನು ಉಳಿಸಿ ಬೆಳೆಸುವ ಜೊತೆಗೆ ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾಗಿರುವ ಕನ್ನಡ ಸೋದರ-ಸೋದರಿಯರ ಬದುಕು ಕಟ್ಟಿಕೊಡಲು ತನು-ಮನ ಧನದಿಂದ ನೆರವಾಗೋಣ ಎಂದು ಸಿಎಂ ಹೇಳಿದ್ದಾರೆ.