ಭಾರತ ಮತ್ತು ಇಂಗ್ಲೆಂಡ್ ನಡುವಿನ 5ಪಂದ್ಯಗಳ ಟೆಸ್ಟ್ ಸರಣಿಯ ಮೊದಲನೇ ಪಂದ್ಯ ಇಂದು ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಎರಡೂ ತಂಡಗಳಿಗೂ ಮಹತ್ವದ ಪಂದ್ಯ ಇದಾಗಿದ್ದು ಆಟಗಾರರ ಆಯ್ಕೆಯಲ್ಲಿ ಎರಡೂ ತಂಡಗಳ ಆಯ್ಕೆಗಾರರು ಬಹಳ ಎಚ್ಚರಿಕೆ ವಹಿಸಿದ್ದಾರೆ. ಅದರಲ್ಲಿಯೂ ಬೌಲರ್ ಗಳ ಆಯ್ಕೆಯ ವಿಚಾರದಲ್ಲಿ ತುಸು ಹೆಚ್ಚೇ ಜಾಗರೂಕತೆಯನ್ನು ವಹಿಸುತ್ತಾರೆ ಎಂದು ಹೇಳಬಹುದು.
ಕಳೆದ ಬಾರಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಸರಣಿಯಲ್ಲಿ ಬೌಲರ್ ಗಳು ಪ್ರಮುಖ ಪಾತ್ರ ನಿರ್ವಹಿಸಿದ್ದ ಕಾರಣ ಈ ಬಾರಿಯ ಟೆಸ್ಟ್ ಸರಣಿಯಲ್ಲಿ ಬೌಲರ್ ಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಸಾಕಷ್ಟು ಆಯಾಮಗಳಿಂದ ಯೋಚಿಸಿ ಆಯ್ಕೆ ಮಾಡಲಾಗಿರುತ್ತದೆ. ಆದರೆ ಇಂಗ್ಲೆಂಡ್ ವಿರುದ್ಧದ ಮೊದಲ ನೇ ಪಂದ್ಯಕ್ಕೆ ವಿರಾಟ್ ಕೊಹ್ಲಿ ರವಿಚಂದ್ರನ್ ಅಶ್ವಿನ್ ಅವರನ್ನು ಆಯ್ಕೆ ಮಾಡದೇ ಕೈಬಿಟ್ಟಿರುವುದು ಇದೀಗ ಎಲ್ಲೆಡೆ ಭಾರೀ ಚರ್ಚೆಗೆ ಕಾರಣವಾಗಿದೆ.
ಕಳೆದ ಬಾರಿಯ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 32 ವಿಕೆಟ್ ಪಡೆದು ಮಿಂಚಿದ್ದ ರವಿಚಂದ್ರನ್ ಅಶ್ವಿನ್ ಅವರಿಗೆ ಈ ಬಾರಿಯ ಟೆಸ್ಟ್ ಸರಣಿಯಲ್ಲಿ ಅವಕಾಶ ನೀಡದೆ ಇರುವುದು ಇದೀಗ ಟೀಕೆಗೆ ಕಾರಣವಾಗಿದೆ. ಇಂಗ್ಲೆಂಡ್ ತಂಡದ ಪ್ರಮುಖ ಆಟಗಾರರ ವಿಕೆಟ್ ಗಳನ್ನು ಪಡೆದು ಮಿಂಚಿತಾ ರವಿಚಂದ್ರನ್ ಅಶ್ವಿನ್ ಅವರಿಗೆ ಈ ಬಾರಿ ವಿರಾಟ್ ಕೊಹ್ಲಿ ಯಾಕೆ ತಂಡದಲ್ಲಿ ಸ್ಥಾನ ನೀಡಲಿಲ್ಲ ಎಂಬುದರ ಕುರಿತು ಇದೀಗ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದ ಚರ್ಚೆಯಾಗಿದೆ.