ಯಡಿಯೂರಪ್ಪಗೆ ತೊಂದರೆ ಕೊಟ್ಟರೆ ಹೋರಾಟ ಎಂದ ಸ್ವಾಮೀಜಿ

Date:

” ಯಡಿಯೂರಪ್ಪ ಅಧಿಕಾರಕ್ಕೆ ಬಂದಾಗಲೆಲ್ಲಾ ತೊಂದರೆ ನೀಡಲಾಗುತ್ತಿದೆ. ಇದೇ ರೀತಿ ಮುಂದುವರೆದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ” ಎಂದು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಜ್ಞಾನಪ್ರಭು ಶ್ರೀ ಗುರು ಸಿದ್ಧರಾಮ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ವಿವಿಧ ಮಠಾಧೀಶರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದಾರೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿದ್ದಾರೆ.

 

ಕಡೂರಿನಲ್ಲಿ ಮಾತನಾಡಿದ ಶ್ರೀ ಗುರು ಸಿದ್ಧರಾಮ ದೇಶಿಕೇಂದ್ರ ಸ್ವಾಮೀಜಿ, “ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಬೇಡವೇ ಬೇಡ. ಯಡಿಯೂರಪ್ಪ ಎಲ್ಲರನ್ನೂ ಒಗ್ಗೂಡಿಸಿ ಕೊಂಡು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ” ಎಂದರು. “ಅವರ ಅವಧಿ ಮುಗಿಯುವವರೆಗೂ ಕಾಲಾವಕಾಶ ನೀಡಬೇಕು. ಯಡಿಯೂರಪ್ಪ ದಕ್ಷ, ಪ್ರಮಾಣಿಕ ಸಮರ್ಥ ನಾಯಕರು ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಇಂತಹ ಸಂದರ್ಭದಲ್ಲಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು ಸಮಂಜಸವಲ್ಲ” ಎಂದು ಹೇಳಿದರು.

“ಕಳೆದ ಎರಡು ವರ್ಷದ ಕೊರೊನಾ ಸಂದರ್ಭದಲ್ಲಿ ತಮ್ಮ ವಯಸ್ಸನ್ನು ಮರೆತು ಯುವಕರಂತೆ ಹೋರಾಟ ಮಾಡಿ ನಾಡಿನ ಹಿತದೃಷ್ಟಿಯಿಂದ ಉತ್ತಮ ಕೆಲಸ ಮಾಡಿದ್ದಾರೆ. ಇದನ್ನು ಹೈಕಮಾಂಡ್ ಮನಗಂಡು ತೀರ್ಮಾನ ತಗೆದುಕೊಳ್ಳಬೇಕು” ಎಂದು ಸ್ವಾಮೀಜಿ ಒತ್ತಾಯಿಸಿದರು.

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...