ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಅನರ್ಹಗೊಂಡಿರುವ ಶಾಸಕರುಗಳ ಸ್ಪರ್ಧೆಗೆ ಅವಕಾಶವಿಲ್ಲವೆಂದು ಈಗಾಗಲೇ ಚುನಾವಣಾ ಆಯೋಗ ಹೇಳಿದೆ.
ಇದರಿಂದಾಗಿ ಅನರ್ಹ ಶಾಸಕರ ಜೊತೆಗೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೂ ಟೆನ್ಶನ್ ಶುರುವಾಗಿಯಂತೆ, ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಯಾವ ತೀರ್ಪು ಹೊರ ಬೀಳಲಿದೆಯೋ ಎಂಬ ಆತಂಕ ಕಾಡುತ್ತಿದೆ. ಇದೀಗ ಯಡಿಯೂರಪ್ಪನವರು ತಮ್ಮ ಪೂರ್ವ ನಿಗದಿತ ಕಾರ್ಯಕ್ರಮ ರದ್ದುಪಡಿಸಿ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸದಲ್ಲೇ ಉಳಿದಿದ್ದು, ಕೋರ್ಟ್ ಕಲಾಪದ ಕ್ಷಣಕ್ಷಣದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆನ್ನಲಾಗಿದೆ.