ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಕಡೆಗಣಿಸುತ್ತಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಮಾತು ಕೇಳಿಬರುತ್ತಿದ್ದಾಂತೆ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಭೀಮಾಶಂಕರ ಪಾಟೀಲ್, ಸಂಘಟನೆ ವಿಚಾರದಲ್ಲಿ ಯಡಿಯೂರಪ್ಪ ಅವರನ್ನು ಕಡೆಗಣಿಸಿದರೆ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಸಂಪೂರ್ಣವಾಗಿ ನೆಲ ಕಚ್ಚಲಿದೆ ಎಂದು ಎಚ್ಚರಿಸಿದ್ದಾರೆ.
ವೀರಶೈವ ಲಿಂಗಾಯತ ಸಮಾಜದ ಪ್ರಶ್ನಾತೀತ ನಾಯಕರಾಗಿರುವ ಯಡಿಯೂರಪ್ಪನವರು ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಪಕ್ಷ ಸಂಘಟಿಸುತ್ತಿದ್ದಾರೆ. ಆದರೆ ಈಗ ಅವರ ವಿರುದ್ಧ ಪಿತೂರಿ ನಡೆಯುತ್ತಿದ್ದು, ಅವರನ್ನು ಕಡೆಗಣಿಸಿದರೆ ಉತ್ತರ ಕರ್ನಾಟಕದ 13 ಜಿಲ್ಲೆಗಳ ಪದಾಧಿಕಾರಿಗಳು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಭೀಮಾಶಂಕರ ಪಾಟೀಲ್ ತಿಳಿಸಿದ್ದಾರೆ.