ಉಪಚುನಾವಣೆಯಲ್ಲಿ ಸೋತ ಎಂಟಿಬಿ ನಾಗರಾಜ್ ಅವರು ಸಚಿವ ಸ್ಥಾನದ ಆಕಾಂಕ್ಷಿ ಎಂದು ರಾಜಕೀಯ ವಲಯದಲ್ಲಿ ಮಾತು ಕೇಳಿಬರುತ್ತಿತ್ತು ಆದರೆ ಇಂದು ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸಕ್ಕೆ ಆಗಮಿಸಿದ ಎಂಟಿಬಿ ನಾಗರಾಜ್ ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ಮುಖ್ಯಮಂತ್ರಿಯೊಂದಿಗೆ ರಹಸ್ಯ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮೂರು ದಿನಗಳ ಹಿಂದೆಯಷ್ಟೇ ಬಿಎಸ್‍ವೈ ಅವರನ್ನು ಭೇಟಿಯಾಗಿದ್ದ ಎಂಟಿಬಿ ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡರ ವಿರುದ್ದ ಶಿಸ್ತುಕ್ರಮ ಜರುಗಿಸಬೇಕೆಂದು ಪಟ್ಟು ಹಿಡಿದಿದ್ದರು.

ಬೇಟಿಯಾದ ವಿಚಾರ ಇನ್ನು ತಿಳಿದು ಬಂದಿಲ್ಲ ಆದರೆ ಯಡಿಯೂರಪ್ಪ ಅವರು ಎಂಟಿಬಿ ಅವರಿಗೆ ಯಾವ ಸ್ಥಾನ ಕೊಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲು ಕೇಳಿಬರುತ್ತಿದೆ . ಇನ್ನು ಯಡಿಯೂರಪ್ಪ ಅವರು ಯಾರಿಗೆ ಯಾವ ಸ್ಥಾನ ಎಂಬುದರ ಬಗ್ಗೆ ಸ್ಪಷ್ಟವಾಗಿ ಹೇಳಿಲ್ಲ ಸದ್ಯದಲ್ಲೇ ದೆಹಲಿಗೆ ತೆರಳಿ ಸಚಿವರ ಪಟ್ಟಿ ಸಿದ್ದಪಡಿಸಲಿದ್ದಾರೆ ಎನ್ನಲಾಗುತ್ತಿದೆ.






