ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ರಾಮಲಿಂಗ ರೆಡ್ಡಿ ಅವರು ಬಿಟಿಎಂ ಲೇಔಟ್‍ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ನೂರು ದಿನ ಪೂರೈಸಿದೆ. ಕೇಂದ್ರದ ಸಹಕಾರ ಸಿಕ್ಕಿದ್ದರೆ ಆಡಳಿತಕ್ಕೆ ಒಳ್ಳೆಯ ಹೆಸರು ಬರುವ ಸಾಧ್ಯತೆ ಇತ್ತು.
ಆದರೆ ನಾಡಿನಲ್ಲಿ, ಅತಿವೃಷ್ಟಿ ವಿಚಾರದಲ್ಲಿ ಕೇಂದ್ರ ತೀವ್ರ ನಿರ್ಲಕ್ಷ್ಯ ಮಾಡಿದ್ದರಿಂದ ರಾಜ್ಯ ಸರ್ಕಾರದ ಬಗ್ಗೆ ಜನರಲ್ಲಿ ಒಳ್ಳೆಯ ಅಭಿಪ್ರಾಯ ಇಲ್ಲ. ಅತಿವೃಷ್ಟಿ, ಅನಾವೃಷ್ಟಿ ಪರಿಸ್ಥಿತಿಯಲ್ಲಿ ಯಾವುದೇ ಸರ್ಕಾರವಿದ್ದರೂ ಕೇಂದ್ರದ ನೆರವು ಅಗತ್ಯ. ಆದರೆ ಬಿಜೆಪಿ ಸರ್ಕಾರಕ್ಕೆ ಕೇಂದ್ರ ಸರಿಯಾಗಿ ಸ್ಪಂದಿಸಿಲ್ಲ ಎಂದು ರಾಮಲಿಂಗಾರೆಡ್ಡಿ ಹೇಳಿದರು.