ಉಪಚುನಾವಣೆ ಸಿಎಂ ಯಡಿಯೂರಪ್ಪನವರ ಪಾಲಿಗೆ ಅಗ್ನಿ ಪರೀಕ್ಷೆಯಾಗಿದೆ. ಕನಿಷ್ಠ ಎಂಟು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಮಾತ್ರ ಅವರ ಸರ್ಕಾರ ಮುಂದಿನ ಮೂರುವರೆ ವರ್ಷಗಳ ಕಾಲ ನಿರಾಯಸವಾಗಿ ಅಧಿಕಾರ ನಡೆಸಬಹುದಾಗಿದೆ.
ಇದೆಲ್ಲದರ ಮಧ್ಯೆ ರಾಜಗುರುಗಳಾದ ದ್ವಾರಕನಾಥ್, 2020 ರ ಮಾರ್ಚ್ ವರೆಗೆ ಯಡಿಯೂರಪ್ಪನವರಿಗೆ ಸಂಕಷ್ಟ ಎದುರಾಗಲಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ವಿಧಾನಸಭಾ ಉಪ ಚುನಾವಣೆಯಲ್ಲಿ ಪಕ್ಷಾಂತರ ಮಾಡಿದವರಿಗೂ ತೊಂದರೆ ತಪ್ಪಿದ್ದಲ್ಲ ಎಂಬ ಪರೋಕ್ಷ ಸೂಚನೆಯನ್ನು ನೀಡಿದ್ದಾರೆ.