ಅನರ್ಹ ಶಾಸಕ ವಿಶ್ವನಾಥ್ ಅಚ್ಚರಿಯ ಬೇಡಿಕೆ ಇಟ್ಟಿದ್ದಾರೆ. ಹುಣಸೂರು ತಾಲ್ಲೂಕು ಕೇಂದ್ರವನ್ನು ಜಿಲ್ಲಾ ಕೇಂದ್ರವಾಗಿಸಿ ಹೊಸ ಜಿಲ್ಲೆ ರಚನೆ ಮಾಡಬೇಕೆಂದು ಅವರು ಬೇಡಿಕೆ ಇಟ್ಟಿದ್ದಾರೆ. ಹಾಗು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಹೊಸ ಜಿಲ್ಲೆ ರಚನೆಗೆ ಮನವಿ ಸಲ್ಲಿಸಿದ್ದಾರೆ.
ವಿಜಯನಗರ ಕ್ಷೇತ್ರದ ಅನರ್ಹ ಶಾಸಕ ಆನಂದ್ ಸಿಂಗ್ ಹೊಸಪೇಟೆ ಜಿಲ್ಲಾ ಕೇಂದ್ರವಾಗಿಸಿ ನೂತನ ವಿಜಯನಗರ ಜಿಲ್ಲೆ ರಚನೆಗೆ ಬೇಡಿಕೆ ಇಟ್ಟಿದ್ದು ಇದಕ್ಕೆ ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಉಪಚುನಾವಣೆಯವರೆಗೂ ನೂತನ ಜಿಲ್ಲೆ ಪ್ರಸ್ತಾಪವನ್ನು ಮುಂದೂಡಲಾಗಿದೆ.