ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರ ಜನ್ಮದಿನದ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮಹೇಶ್ ಟೆಂಗಿನಕಾಯಿ, ಶ್ರೀ ಸಿದ್ದರಾಜು, ರಾಜ್ಯ ಉಪಾಧ್ಯಕ್ಷರಾದ ಶ್ರೀ ಬಿ. ವೈ. ವಿಜಯೇಂದ್ರ, ಪ್ರಕೋಷ್ಠಗಳ ರಾಜ್ಯ ಸಂಚಾಲಕರಾದ ಶ್ರೀ ಎಂ. ಭಾನುಪ್ರಕಾಶ್ ಉಪಸ್ಥಿತರಿದ್ದರು.ಪಿಎಂ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ‘ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಜನ್ಮದಿನದ ಶುಭಾಶಯಗಳು. ಯಡಿಯೂರಪ್ಪ ಅವರು ನಮ್ಮ ಅತ್ಯಂತ ಅನುಭವಿ ನಾಯಕರಲ್ಲಿ ಒಬ್ಬರು. ಅವರು ರೈತರ ಕಲ್ಯಾಣ ಮತ್ತು ಬಡವರ ಸಬಲೀಕರಣಕ್ಕಾಗಿ ತಮ್ಮ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಅವರಿಗೆ ದೀರ್ಘಾಯಸ್ಸು ಮತ್ತು ಆರೋಗ್ಯಯುತ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.