ಡಾಲರ್ಸ್ ಕಾಲನಿಯಲ್ಲಿರುವ ಮುಖ್ಯಮಂತ್ರಿಯ ನಿವಾಸದಲ್ಲಿ ಯಡಿಯೂರಪ್ಪ ಸಂಮುಕದಲ್ಲಿ. ಉಭಯ ಮುಖಂಡರ ನಡುವೆ ನಡೆದ ಮಾತುಕತೆ ವೇಳೆ, ರೋಷನ್ ಬೇಗ್‌ರನ್ನು ಸಮಾಧಾನಪಡಿಸಲು ಯಡಿಯೂರಪ್ಪ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಿಜೆಪಿ ಸೇರ್ಪಡೆ ಹಾಗೂ ಟಿಕೆಟ್ ನಿರಾಕರಣೆಗೆ ಎದುರಾಗಿದ್ದ ಸಮಸ್ಯೆಗಳ ಕುರಿತು ರೋಷನ್ ಬೇಗ್‌ಗೆ, ಯಡಿಯೂರಪ್ಪ ವಿವರಿಸಿದ್ದಾರೆ. ಆದರೆ, ಈ ಬಾರಿಯ ಉಪ ಚುನಾವಣೆಯಲ್ಲಿ ಶಿವಾಜಿನಗರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಇದೇ ವೇಳೆ ಯಡಿಯೂರಪ್ಪ ಮನವಿ ಮಾಡಿದ್ದಾರೆ ಎನ್ನಲಾಗಿದೆ.






