ಯಡಿಯೂರಪ್ಪ ಅವರ ಆಡಿಯೋ ಬಹಿರಂಗ ಪಡಿಸಿದ್ದಯ ಇವರೇ !?

admin
By admin
0 Min Read

ಯಡಿಯೂರಪ್ಪನವರು ಆಡಿದ ಮಾತಿನ ಆಡಿಯೋ ಈಗ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಈ ವಿಚಾರ ಈಗಾಗಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಮಾಡಿದ ಮನವಿಗೆ ಸ್ಪಂದಿಸಿರುವ ಸುಪ್ರೀಂ ಕೋರ್ಟ್, ಶಾಸಕರ ಅನರ್ಹತೆ ಕುರಿತ ವಿಚಾರಣೆ ವೇಳೆ ಈ ಆಡಿಯೋವನ್ನು ಪರಿಗಣಿಸುವುದಾಗಿ ಹೇಳಿದೆ.

 

ಈ ಆಡಿಯೋವನ್ನು ಬಹಿರಂಗಗೊಳಿಸಿದ್ದು ಯಾರು ಎಂಬ ಪ್ರಶ್ನೆ ಪ್ರತ್ಯಾರೋಪಗಳು ಕೇಳಿ ಬರುತ್ತಿದ್ದು, ಬಿಜೆಪಿ ನಾಯಕರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಆಡಿಯೋ ಬಹಿರಂಗಗೊಳಿಸಿದ ಹಿಂದಿನ ರೂವಾರಿ ಎಂದು ಹೇಳುತ್ತಿದ್ದಾರೆ. ಜೊತೆಗೆ ಸಿದ್ದರಾಮಯ್ಯನವರ ಕೆಲ ಆಡಿಯೋಗಳು ನಮ್ಮ ಬಳಿಯೂ ಇದೆ ಎಂದು  ಕೂಡ ಹೇಳಿದ್ದಾರೆ ಎನ್ನಲಾಗುತ್ತಿದೆ.

Share This Article