ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಟೀಂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಬಂಧಿಸು ತ್ತಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತಾನಾಡಿದ ಅವರು, ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಅಷ್ಟೇ ಅಲ್ಲದೇ ಸಂತ್ರಸ್ತೆಯ ಪುತ್ರ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಆದೇಶಿಸಿ ಎಂದು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಆದ್ದರಿಂದ ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ. ಯಡಿಯೂರಪ್ಪ ಬಂದು ನೋಟಿಸ್ಗೆ ಉತ್ತರ ನೀಡಬೇಕಾಗುತ್ತದೆ ಎಂದರು. ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್ಶೀಟ್ ಸಲ್ಲಿಸಬೇಕು ಎಂದು ಇದೆ. ಹೀಗಾಗಿ ಯಡಿಯೂರಪ್ಪನವರಿಗೆ ನೋಟಿಸ್ ಕೊಟ್ಟಿದ್ದಾರೆ. ಅಗತ್ಯ ಬಿದ್ರೆ ಸಿಐಡಿಯವರು ಯಡಿಯೂರಪ್ಪರನ್ನ ಬಂಧಿಸ್ತಾರೆ. ಈ ಬಗ್ಗೆ ನಾನು ಏನೂ ಹೇಳಲು ಆಗದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.