ಇದೀಗ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅರವಿಂದ ಮಾಲಗತ್ತಿ ಕೂಡಾ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದು, ಯಡಿಯೂರಪ್ಪನವರು ಬಹುಮತ ಸಾಬೀತುಪಡಿಸಿದ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಹೊಸ ಸರ್ಕಾರ ಬಂದಾಗ ಹಳೆ ಸರ್ಕಾರದ ಅವಧಿಯಲ್ಲಿ ನೇಮಕಗೊಂಡವರು ರಾಜೀನಾಮೆ ನೀಡುವುದು ಸಹಜ ಪ್ರಕ್ರಿಯೆ. ಹೀಗಾಗಿ ಯಡಿಯೂರಪ್ಪ ಬಹುಮತ ಸಾಬೀತುಪಡಿಸಿದ ಬಳಿಕ ತಾವು ರಾಜೀನಾಮೆ ನೀಡುವುದಾಗಿ ಸ್ಪಷ್ಟಪಡಿಸಿದ್ದಾರೆ.