ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪನವರ ಈ ನಿರ್ಧಾರ ದ್ವೇಷ -ನಾಶದ ರಾಜಕಾರಣದ ಪ್ರತೀಕವಾಗಿದೆ ಎಂದು ಹೆಚ್.ಡಿ.ಕೆ. ಟೀಕಿಸಿದ್ದಾರೆ. ರಾಮನಗರದಲ್ಲಿ ಫಿಲಂ ಸಿಟಿ ನಿರ್ಮಿಸಬೇಕೆಂದು ನಮ್ಮ ಸರ್ಕಾರದಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಈ ಮೂಲಕ ರಾಮನಗರ,ಬೆಂಗಳೂರು ಮತ್ತು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವಕರಿಗೆ ಉದ್ಯೋಗ ಸೃಷ್ಟಿಸುವುದು ಯೋಜನೆಯ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ. ಫಿಲಂ ಸಿಟಿಯನ್ನು ಸ್ಥಳಾಂತರ ಮಾಡುವ ನಿರ್ಧಾರ ಕೈಗೊಳ್ಳುವ ಮೂಲಕ ಯಡಿಯೂರಪ್ಪ, ರಾಮನಗರದ ವಿಚಾರದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.