ಮುಖ್ಯಮಂತ್ರಿಗಳಾಗಿ ಬಿಎಸ್ ಯಡಿಯೂರಪ್ಪ ಇರುವುದು ಬಹುತೇಕ ಬಿಜೆಪಿ ಪಕ್ಷದ ಮುಖಂಡರುಗಳಿಗೆ ಇಷ್ಟವಿಲ್ಲ. ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರು ಕಾಲೆಳೆಯಲು ಹೈಕಮಾಂಡ್ ಒಂದಲ್ಲ ಒಂದು ರೀತಿಯ ತಂತ್ರವನ್ನು ಎಳೆಯುತ್ತಿದೆ ಇತ್ತೀಚಿನ ದಿನಗಳಲ್ಲಿ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರವಾಗಿ ಅವರ ಪಕ್ಷದ ಹೈಕಮಾಂಡ್ ನಡೆದುಕೊಂಡ ರೀತಿಯೇ ಇದಕ್ಕೆ ಮೂಲ ಕಾರಣ ಎಂದು ಹೇಳಲಾಗುತ್ತಿದೆ ಎಂದು ಪರಮೇಶ್ವರ್ ಅವರು ಹೇಳಿದರು.
ಅನರ್ಹ ಶಾಸಕರೆಂದು ಹೇಳಿಕೊಳ್ಳುವ ಪಕ್ಷಕ್ಕೆ ಮೊಸ ಮಾಡಿ ಹೊಗಿರಿವವರು ತಮ್ಮ ಕ್ಷೇತ್ರಗಳಲ್ಲಿ ಗೆದ್ದು ರಾಜೀನಾಮೆ ನೀಡಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು ಪರೋಕ್ಷವಾಗಿ ಸಹಕರಿಸಿ ನಂತರ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಪರವಾಗಿ ಚುನಾವಣೆಗೆ ನಿಂತಿರುವುದರಿಂದ ರಾಜ್ಯದ ಜನರಿಗೆ ಹಾಗೂ ಕ್ಷೇತ್ರದ ಜನರಿಗೆ ವಂಚನೆ ಮಾಡಿದ ಅನರ್ಹ ಶಾಸಕರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.