ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದೇನು..?

By
1 Min Read

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಬಗ್ಗೆ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದರು.
ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸಲು ಸಾಧ್ಯವಿಲ್ಲ. ಇದು ಒಬ್ಬ ಮಾಜಿ ಮುಖ್ಯಮಂತ್ರಿ ವಿಷಯಕ್ಕೆ ಸಂಬಂಧಿಸಿದ್ದಾಗಿದೆ. ಇದು ಬಹಳ ಸೂಕ್ಷ್ಮ ವಿಷಯವಾಗಿದೆ. ಮಹಿಳೆಗೆ ರಕ್ಷಣೆ ಅಗತ್ಯ ಬಿದ್ದರೆ ಕೊಡುತ್ತೇವೆ. ಅವರನ್ನು ವಶಕ್ಕೆ ಪಡೆಯುವ ಸಂಬಂಧ ತನಿಖೆಯ ಮೇಲೆ ನಿರ್ಧಾರ ಮಾಡಲಾಗುತ್ತದೆ. ಇದರ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೂ ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿ ಕೂಡ ಇದರ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದರು.

Share This Article