ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಆಗಸ್ಟ್ 9 ಇಲ್ಲವೇ 11 ರಂದು ವಿಸ್ತರಣೆಯಾಗಲಿದೆ. ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಯಡಿಯೂರಪ್ಪ ಮತ್ತಿತರ ನಾಯಕರು ಆ.5ರಂದು ದೆಹಲಿಗೆ ತೆರಳಲಿದ್ದು, ವರಿಷ್ಠರೊಂದಿಗೆ ಚರ್ಚಿಸಿದ ನಂತರ ಮೊದಲ ಕಂತಿನ ಸಂಪುಟ ವಿಸ್ತರಣೆ ನಡೆಯಲಿದೆ.
ಮೊದಲ ಕಂತಿನಲ್ಲಿ ಹತ್ತು ಮಂದಿಯನ್ನು ಸೇರ್ಪಡೆ ಮಾಡಿಕೊಳ್ಳಲು ನಿರ್ಧರಿಸಲಾಗಿದ್ದು, ರಾಜೀನಾಮೆ ನೀಡಿ ಅನರ್ಹಗೊಂಡಿರುವ ಶಾಸಕರ ಪ್ರಕರಣ ಸುಪ್ರೀಂಕೋರ್ಟ್‍ನಲ್ಲಿ ಇತ್ಯರ್ಥವಾದರೆ ಮೊದಲ ಕಂತಿನಲ್ಲಿ ಇಪ್ಪತ್ತು ಮಂದಿ ಸಚಿವರಾಗಲಿದ್ದಾರೆ.
ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾದವರನ್ನು ಸೇರಿಸಿಕೊಳ್ಳಬೇಕು ಎಂದು ಯಡಿಯೂರಪ್ಪ ಪಟ್ಟು ಹಿಡಿದಿದ್ದು ಈ ಹಿನ್ನೆಲೆಯಲ್ಲಿ ಇಂದು ದೆಹಲಿಗೆ ಹೋಗುವ ಪೂರ್ವ ನಿಯೋಜಿತ ಕಾರ್ಯಕ್ರಮವನ್ನು ರದ್ದುಪಡಿಸಿದ್ದಾರೆ.