ಉಪ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ಅತಿ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿ ಸರ್ಕಾರ ಸುಭದ್ರವಾಗಿದೆ. ಹೆಚ್.ಡಿ. ಕುಮಾರಸ್ವಾಮಿ ಜೆಡಿಎಸ್ -ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಆಪರೇಷನ್ ಕಮಲ ನಡೆಸಲು ಹಲವಾರು ಬಾರಿ ಪ್ರಯತ್ನ ನಡೆಸಿ ಬಿಜೆಪಿ ನಾಯಕರು ವಿಫಲರಾಗಿದ್ದರು. ಯಾಕೋ ಈ ಉಪಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಹಲವಾರು ಟೀಕೆಗಳನ್ನು ಮಾಡಿದ್ದರು ಅದಕ್ಕೆಲ್ಲ ಉತ್ತರವನ್ನು ನಿನ್ನೆ ದೊರಕಿದೆ ಬಿಜೆಪಿಯನ್ನು ಇನ್ನು ಮೂರು ವರ್ಷ ಸ್ಥಿರವಾಗಿ ಇಳಿಸುವುದರಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ .
ಉಪ ಚುನಾವಣೆಯಲ್ಲಿ ಬಿಜೆಪಿಯ 12 ಅಭ್ಯರ್ಥಿಗಳು ಜಯಗಳಿಸಿದ್ದು ಪ್ರಸ್ತುತ ಬಿಜೆಪಿ ಶಾಸಕರ ಸಂಖ್ಯೆ 117ಕ್ಕೆ ಏರಿಕೆಯಾಗಿದೆ. ಯಡಿಯೂರಪ್ಪನವರಿಗೆ ಆನೆಬಲ ಬಂದಂತಾಗಿದೆ. ಬಿಜೆಪಿ ಸರ್ಕಾರ ಸುಭದ್ರವಾಗಿದ್ದು ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಮತ್ತೊಮ್ಮೆ ಪ್ರಶ್ನಾತೀತ ನಾಯಕರಾಗಿದ್ದಾರೆ.