ಯಡಿಯೂರಪ್ಪ ಸಿಎಂ ಮಾಡ್ತಿರೋದಕ್ಕೆ ಸಿದ್ದರಾಮಯ್ಯ ಅವರ ತೀವ್ರ ಆಕ್ಷೇಪ !? ಏನ್ ಹೇಳಿದ್ದಾರೆ ಗೊತ್ತಾ ?

admin
By admin
0 Min Read

ಯಡಿಯೂರಪ್ಪನವರಿಗೆ ಸರ್ಕಾರ ರಚಿಸಲು ಅನುಮತಿ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಹುಮತ ಇಲ್ಲದೆ ಇದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಲು ಹೊರಟಿರುವುದು ಮತ್ತು ಅವರ ತರಾತುರಿಯ ನಿರ್ಧಾರವನ್ನು ರಾಜ್ಯಪಾಲರು ಒಪ್ಪಿರುವುದು ಎರಡೂ ಸಂಸದೀಯ ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಬೆಳವಣಿಗೆಗಳು ಎಂದು ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಂವಿಧಾನದ ಮೇಲೆ ಬಿಜೆಪಿಯವರಿಗೆ ನಂಬಿಕೆ ಇಲ್ಲ ಎನ್ನುವುದು ಇದರಿಂದ ಮತ್ತೊಮ್ಮೆ ಸಾಬೀತಾಗಿದೆ ಎಂದಿದ್ದಾರೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷ ಕೂಡಾ ರಾಜ್ಯಪಾಲರ ತೀರ್ಮಾನವನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

Share This Article