ಯಡಿಯೂರಪ್ಪ ಸ್ಥಾನಕ್ಕೆ ಆಪತ್ತು..! ಯಾರಾಗ್ತಾರೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ..?

0
396

ಲೋಕಸಭಾ ಚುನಾವಣಾ ಫಲಿತಾಂಶ ಅಂದರೆ ಮೇ 23ರ ನಂತರ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಬೇರೆಯವರ ಹೆಗಲಿಗೆ ಹೋಗುವ ಸಾಧ್ಯತೆ ಹೆಚ್ಚಾಗಿದೆ.


ಪ್ರಸಕ್ತ ಕರ್ನಾಟಕ ರಾಜ್ಯದ ಬಿಜೆಪಿಯ ರಾಜ್ಯಾಧ್ಯಕ್ಷರಾಗಿರುವ ಬಿ ಎಸ್ ಯಡಿಯೂರಪ್ಪ ಅವರ ಸ್ಥಾನಕ್ಕೆ ಮತ್ತೊಬ್ಬರನ್ನು ನೇಮಿಸುವ ಚಿಂತನೆಯನ್ನು ಬಿಜೆಪಿಯ ಹೈಕಮಾಂಡ್ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.


ಬಿಜೆಪಿಯ ರಾಜ್ಯ ಅಧ್ಯಕ್ಷ ಬಿಎಸ್ ಯಡಿಯೂರಪ್ಪನವರ ಅಧಿಕಾರ ಅವಧಿ ಮುಗಿಯುತ್ತಿರುವ ಹಿನ್ನಲೆಯಲ್ಲಿ ಬಿಜೆಪಿಯ ಹೈಕಮಾಂಡ್ ಈ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭಿಸಿದೆ ಆದ್ದರಿಂದ ಮೇ 23 ರ ಬಳಿಕ ರಾಜ್ಯ ಬಿಜೆಪಿಗೆ ನೂತನ ಸಾರಥಿ ನೇಮಕವಾಗುವ ಸಾಧ್ಯತೆಗಳು ದಟ್ಟವಾಗಿದೆ.
ಮೇ 23ರ ನಂತರ ಯಡಿಯೂರಪ್ಪನವರಿಂದ ತೆರವಾಗುವ ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ ಬಿಜೆಪಿ ನಾಯಕರಲ್ಲಿ ತೀವ್ರವಾದ ಪೈಪೋಟಿ ಏರ್ಪಟ್ಟಿದೆ ರಾಜ್ಯದ ಬಿಜೆಪಿಯ ನಾಯಕರಾದ ಉಮೇಶ್ ಕತ್ತಿ..

ಡಿವಿ ಸದಾನಂದ ಗೌಡ..

ಶ್ರೀರಾಮುಲು..

ಶೋಭಾ ಕರಂದ್ಲಾಜೆ, ಸುರೇಶ್ ಕುಮಾರ್, ಆರ್ ಅಶೋಕ್ ಸೇರಿದಂತೆ ಇನ್ನೂ ಹಲವು ನಾಯಕರು ಬಿಜೆಪಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.

ಆದರೆ ಈ ಎಲ್ಲಾ ನಾಯಕರು ರೇಸ್ ನಲ್ಲಿ ಇರುವುದನ್ನು ಅರಿತಿರುವ ಯಡಿಯೂರಪ್ಪ ನವರು ಕರಾವಳಿ ಕರ್ನಾಟಕ, ಹೈದರಾಬಾದ್ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಎಲ್ಲಾ ಭಾಗಗಳನ್ನು ಪರಿಗಣನೆಗೆ ತೆಗೆದುಕೊಂಡು ಅರವಿಂದ ಲಿಂಬಾವಳಿ..

ಅಥವಾ ಉಮೇಶ್ ಕತ್ತಿ ಅವರಿಗೆ ನೂತನ ರಾಜ್ಯಾಧ್ಯಕ್ಷ ಸ್ಥಾನವನ್ನು ನೀಡಬೇಕು ಎಂದು ಯಡಿಯೂರಪ್ಪನವರು ಬಿಜೆಪಿಯ ಹೈಕಮಾಂಡ್ ಮುಂದೆ ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತದೆ.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಬಿಜೆಪಿಯ ಹೈಕಮಾಂಡ್ ಯಡಿಯೂರಪ್ಪನವರ ಪ್ರಸ್ತಾವನೆಯನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಆದರೆ ಮೇ 23 ರವರೆಗೂ ಎಲ್ಲರೂ ಕಾಯಬೇಕು ಎಂದು ಹೇಳಿದೆ.

LEAVE A REPLY

Please enter your comment!
Please enter your name here