ಯತ್ನಾಳ್ ಉಚ್ಚಾಟನೆ ವಿಚಾರ: ಮಾಜಿ ಸಚಿವ ಶ್ರೀರಾಮುಲು ಹೇಳಿದ್ದೇನು..?
ಬಳ್ಳಾರಿ: ಅಮಿತ್ ಶಾ, ನಡ್ಡಾ ಹಾಗೂ ಪ್ರಧಾನಿ ಮೋದಿ ಅವರು ಯತ್ನಾಳ್ ಉಚ್ಚಾಟನೆಯನ್ನು ಮರುಪರಿಶೀಲನೆ ಮಾಡಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ಸಾಕಷ್ಟು ಸಾರಿ ಯತ್ನಾಳ್ ಅವರಿಗೆ ಹೇಳಿದ್ದೆ. ನೀವು ನೇರ ನಿಷ್ಠುರವಾದಿ, ಹಿಂದುತ್ವವಾದಿ. ನಿಮಗೆ ತೊಂದರೆ ಆಗುತ್ತೆ ಎಂದರೆ ನೀವು ನಿಷ್ಠುರ ಆಗುತ್ತೀರಿ ಎಂದಿದ್ದೆ ಆದರೆ ಇದೀಗ ಅವರನ್ನು ಉಚ್ಚಾಟನೆ ಮಾಡಿದ್ದಾರೆ.
ಅಮಿತ್ ಶಾ, ನಡ್ಡಾ ಹಾಗೂ ಪ್ರಧಾನಿ ಮೋದಿ ಅವರು ಮರುಪರಿಶೀಲನೆ ಮಾಡಬೇಕು. ಇಡೀ ಪಂಚಮಸಾಲಿ ಸಮುದಾಯ ಬಿಜೆಪಿ ಜೊತೆಗಿದೆ. ಆ ಸಮುದಾಯಕ್ಕೆ ನೋವಾಗಬಾರದು. ಆ ಸಮುದಾಯವನ್ನು ದೂರ ಮಾಡಿಕೊಂಡ್ವಿ ಎಂದು ನೋವು ಪಡಬಾರದು. ಹೀಗಾಗಿ ಮರು ಪರಿಶೀಲನೆ ಮಾಡಬೇಕು ಎಂದು ವಿನಂತಿಸಿಕೊಂಡಿದ್ದಾರೆ.