ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜನರ ಹಣವನ್ನೇ ಚುನಾವಣೆಯಲ್ಲಿ ಖರ್ಚು ಮಾಡಲು ಹೊರಟಿದ್ದಾರೆ. ಅಂತಹವರಿಂದ ಬಡವರಿಗೆ ಯಾವುದೇ ಲಾಭವಿಲ್ಲ ಎಂದು ಟೀಕಿಸಿದರು.
ಮಾಜಿ ಸಚಿವ ರೋಷನ್ ಬೇಗ್ ಅವರು ಉಪ ಚುನಾವಣಾ ಕಣದಿಂದ ಹಿಂದೆ ಸರಿಯುವ ಮೂಲಕ ಉತ್ತಮ ನಿರ್ಧಾರವನ್ನೇ ಕೈಗೊಂಡಿದ್ದಾರೆ ಎಂದು ಹೇಳಿದರು. ಬೆಳಗಾವಿ ಜಿಲ್ಲೆಯಲ್ಲಿ ಒಂದು ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಲಾಗಿದೆ. ರೈತರ ಕಬ್ಬಿನ ಹಣವನ್ನು ಬಾಕಿ ಉಳಿಸಿಕೊಂಡು ಸಾಹುಕಾರ್ ಆದವರು ಇದ್ದಾರೆ ಎಂದು ಪರೋಕ್ಷವಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಉದ್ದೇಶಿಸಿ ವಾಗ್ದಾಳಿ ನಡೆಸಿದರು.