No menu items!
15.1 C
Munich
Saturday, June 13, 2026

ಯಶ್ ಅಭಿಮಾನಿಗಳಿಗೆ ಗುಡ್ ನ್ಯೂಸ್

Must read

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಕೆಜಿಎಫ್ ಚಾಫ್ಟರ್ 2’ ಸಿನಿಮಾಕ್ಕೆ ಸಂಬಂಧಿಸಿದಂತೆ ಬಹಳ ದಿನಗಳ ನಂತರ ಅಪ್ಡೇಟ್ ಒಂದನ್ನು ಚಿತ್ರತಂಡ ಹಂಚಿಕೊಂಡಿದೆ.

ಚಿತ್ರದಲ್ಲಿ ‘ಅಧೀರಾ’ ಪಾತ್ರದಲ್ಲಿ ಅಭಿನಯಿಸಿರುವ ಸಂಜಯ್ ದತ್ ಅವರ ಪಾಲಿನ ಡಬ್ಬಿಂಗ್ ಪ್ರಕ್ರಿಯೆ ಸಂಪೂರ್ಣವಾಗಿದೆ ಎಂದು ಹೊಂಬಾಳೆ ಫಿಲ್ಮ್ಸ್ ಟ್ವಿಟರ್‌ನಲ್ಲಿ ಇಂದು ಮಾಹಿತಿ ಹಂಚಿಕೊಂಡಿದೆ.

 

ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಚಾಫ್ಟರ್ 2 ಮುಂದಿನ ವರ್ಷ ಏಪ್ರಿಲ್ 14 ಕ್ಕೆ ಬಿಡುಗಡೆಗೆ ಸಿದ್ದವಾಗಿದೆ. ಮತ್ತೆ ಕೋವಿಡ್ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಬಿಡುಗಡೆ ಮುಂದೆ ಹೋಗಲಿದೆ ಎಂದು ಊಹಾಪೋಹಗಳು ಎದ್ದಿದ್ದವು. ಆದರೆ, ಸಂಜಯ್ ದತ್ ಅವರ ಡಬ್ಬಿಂಗ್ ಮಾಡುತ್ತಿರುವ ಚಿತ್ರವನ್ನು ಹಂಚಿಕೊಂಡಿರುವ ಚಿತ್ರ ನಿರ್ಮಾಣ ಸಂಸ್ಥೆ, ಏಪ್ರಿಲ್ 14ಕ್ಕೆ ಕೆಜಿಎಫ್ ಅಬ್ಬರಿಸುವುದು ಪಕ್ಕಾ ಎನ್ನುವನ್ನು ಸಾರಿದೆ.

ಚಿತ್ರದಲ್ಲಿ ಸಂಜಯ್‌ ದತ್‌, ರವೀನಾ ಟಂಡನ್‌ ಸೇರಿದಂತೆ ಹಲವು ಪ್ರಮುಖ ನಟರು ಇದ್ದಾರೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ

ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್‌ ಅಡಿಯಲ್ಲಿ ವಿಜಯ್‌ ಕಿರಗಂದೂರು ಚಿತ್ರ ನಿರ್ಮಿಸುತ್ತಿದ್ದಾರೆ. ಈ ವರ್ಷ ಜನವರಿ 7ರಂದು ಚಿತ್ರದ ಯೂನಿವರ್ಸಲ್‌ ಟೀಸರ್‌ ಬಿಡುಗಡೆ ಆಗಿತ್ತು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article