ಯಶ್ ಕಟೌಟ್ ಕಟ್ಟುವಾಗ ವಿದ್ಯುತ್ ಸ್ಪರ್ಶ: ಮೂವರು ದುರ್ಮರಣ

Date:

ಗದಗ: ನಟ ಯಶ್ ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ 3 ಜನ ಸಾವನ್ನಪ್ಪಿದ ಘಟನೆ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನು ಹನುಮಂತ ಹರಿಜನ್ (24), ಮುರಳಿ ನಡುವಿನಮನಿ (20) ಹಾಗೂ ನವೀನ್ ಗಾಜಿ (20) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಂಜುನಾಥ್, ಪ್ರಕಾಶ್ ಹಾಗೂ ಹನುಮಂತ ಎಂಬವರಿಗೆ ಗಂಭೀರ ಗಾಯಾಳಾಗಿವೆ. ಮಧ್ಯರಾತ್ರಿ 1 ಗಂಟೆ ವೇಳೆ ಕಟೌಟ್ ಕಟ್ಟುವ ವೇಳೆ ಈ ದುರ್ಘಟನೆ ನಡೆದಿದೆ. ಗಾಯಾಳುಗಳನ್ನು ಲಕ್ಷ್ಮೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಮಧ್ಯರಾತ್ರಿ ವೇಳೆ, ಹತ್ತಾರು ಜನ ಯುವಕರು ಸೇರಿಕೊಂಡು ತಮ್ಮ ನೆಚ್ಚಿನ ನಟನ ಕಟೌಟ್ ಕಟ್ಟಲು ಮುಂದಾಗಿದ್ದಾರೆ. ರಾತ್ರಿ ಸಮಯ ಆಗಿದ್ದರಿಂದ ವಿದ್ಯುತ್ ತಂತಿ ಯುವಕರ ಗಮನಕ್ಕೆ ಬಂದಿಲ್ಲ. ಇದರಿಂದ ಈ ದುರ್ಘಟನೆ ಸಂಭವಿಸಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಸೂತಕದ ಛಾಯೆ ಮನೆ ಮಾಡಿದೆ. ಈ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...