ಟೀಂ ಇಂಡಿಯಾದ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಮತ್ತು ಪತ್ನಿ ಧನಶ್ರೀ ವರ್ಮಾ ಇಂದು ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ದಂಪತಿಯನ್ನು ಭೇಟಿಯಾಗಿದ್ದಾರೆ. ಸ್ಟಾರ್ ದಂಪತಿಗಳ ಅಪರೂಪದ ಭೇಟಿ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.
ಚಾಹಲ್ ದಂಪತಿ ಸದ್ಯ ಬೆಂಗಳೂರಿನಲ್ಲಿದ್ದು ಯಶ್ ಮತ್ತು ರಾಧಿಕಾ ಅವರನ್ನು ಭೇಟಿಯಾಗಿ ಕೆಲ ಸಮಯ ಮಾತುಕತೆ ನಡೆಸಿದ್ದಾರೆ. ಮದುವೆ ಬಳಿಕ ಚಾಹಲ್ ಪತ್ನಿ ಜೊತೆ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಕೆಜಿಎಫ್ ಚಿತ್ರದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿರುವ ಯಶ್ ಅವರನ್ನು ಚಾಹಲ್ ಭೇಟಿಯಾಗಿದ್ದಾರೆ.
ಯಶ್ ದಂಪತಿ ಖಾಸಗಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಅದಾದ ಬಳಿಕ ಈ ಕ್ರಿಕೆಟ್ ತಾರೆ ಹಾಗೂ ಸಿನಿ ತಾರೆಯರು ಬೇಟಿಯಾಗಿದ್ದಾರೆ. ಯಶ್ ಮತ್ತು ರಾಧಿಕಾ ಜೊತೆ ಚಾಹಲ್ ಮತ್ತು ಧನಶ್ರೀ ಜೋಡಿ ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಈ ಫೋಟೋವನ್ನು ಚಹಲ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಚಹಲ್ ಶೇರ್ ಮಾಡುತ್ತಿದ್ದಂತೆ ಕ್ರಿಕೆಟಿಗ ಹಾಗೂ ನಟ ಇಬ್ಬರ ಅಭಿಮಾನಿಗಳೂ ಪ್ರತಿಕ್ರಿಯಿಸುತ್ತಿದ್ದಾರೆ.
ಟೀಂ ಇಂಡಿಯಾದ ಸ್ಪಿನ್ನರ್ ಚಾಹಲ್ ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್‌ಗಳ ಸರಣಿ ಮುಗಿಸಿ ತವರಿಗೆ ವಾಪಾಸಾದ ನಂತರ ಡಿಸೆಂಬರ್ ನಲ್ಲಿ ಗೆಳತಿ ಡ್ಯಾನ್ಸರ್ ಧನಶ್ರೀ ವರ್ಮ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಗುರುಗ್ರಾಮದ ಕರ್ಮ ಲೇಕ್ ರೆಸಾರ್ಟ್ ನಲ್ಲಿ ಇಬ್ಬರು ಹಿಂದೂ ಸಂಪ್ರದಾಯದಂತೆ ವಿವಾಹ ಬಂಧನಕ್ಕೆ ಒಳಗಾಗಿದ್ದರು.
ಸದ್ಯ ಟೀಮ್ ಇಂಡಿಯಾ ಸೀಮಿತ ಓವರ್‌ಗಳ ಖಾಯಂ ಸದಸ್ಯನಾಗಿರುವ ಚಾಹಲ್ ಮುಂಬರುವ ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗುವುದರಲ್ಲಿ ಅನುಮಾನವಿಲ್ಲ. ಅದಾದ ಬಳಿಕ ಐಪಿಎಲ್ 2021 ಆವೃತ್ತಿಯೂ ಆರಂಭವಾಗಲಿರುವ ಕಾರಣ ಮುಂದಿನ ದಿನಗಳಲ್ಲಿ ಸಾಕಷ್ಟು ಬ್ಯುಸಿ ಇರಲಿದ್ದಾರೆ. ಆದರೆ ಸದ್ಯ ಟೆಸ್ಟ್ ಸರಣಿ ನಡೆಯುತ್ತಿರುವ ಕಾರಣ ಕುಟುಂಬದ ಜೊತೆಗೆ ಕಾಲ ಕಳೆಯಲು ಉತ್ತಮ ಸಮಯ ದೊರೆತಿದೆ.
ಸ್ಟಾರ್ ನಟರ ಹೆಸರಿನಲ್ಲಿ ಅಭಿಮಾನಿ ಸಂಘಗಳನ್ನು ಕಟ್ಟಿಕೊಳ್ಳುವುದು ಸಾಮಾನ್ಯವಾಗಿ ಪುರುಷರು. ಅದರಲ್ಲೂ ಯುವಕರ ಗುಂಪು ಇಂಥ ಕೆಲಸಗಳಲ್ಲಿ ಸದಾ ಮುಂಚೂಣಿಯಲ್ಲಿ ಇರುತ್ತದೆ. ಆದರೆ ಕಿಚ್ಚ ಸುದೀಪ್ ಅವರ ಮಹಿಳಾ ಅಭಿಮಾನಿಗಳು ಕೂಡ ಇಂಥದ್ದೊಂದು ಸಂಘ ಮಾಡಿಕೊಂಡು ಒಳ್ಳೆಯ ಕೆಲಸಗಳಲ್ಲಿ ನಿರತರಾಗಿದ್ದಾರೆ!
ಈ ಮಹಾಸೇನೆಯಲ್ಲಿ ಬರೀ ಮಹಿಳೆಯರೇ ಸಕ್ರಿಯರಾಗಿದ್ದಾರೆ. 5 ಸಾವಿರಕ್ಕೂ ಅಧಿಕ ಸ್ರೀಯರು ಸುದೀಪ್ ಮೇಲಿನ ಅಭಿಮಾನಕ್ಕಾಗಿ ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ನಟರೊಬ್ಬರಿಗೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಮಹಿಳಾ ಅಭಿಮಾನಿಗಳನ್ನು ಹೊಂದಿರುವ ಸಂಘ ಭಾರತದಲ್ಲೇ ಮೊದಲು ಎಂದು ಈ ಮಹಿಳಾ ಸೇನೆಯ ಸದಸ್ಯರು ಹೇಳಿಕೊಂಡಿದ್ದಾರೆ.
ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ಅಡಿಯಲ್ಲಿ ಈ ಸಂಘ ಕಾರ್ಯ ನಿರ್ವಹಿಸುತ್ತಿದೆ. ಸುದೀಪ್ ಅವರ ಮಾರ್ಗದರ್ಶನದಲ್ಲಿ ತಾವು ಮುನ್ನಡೆಯುವುದಾಗಿ ಈ ಸಂಘದ ಮಹಿಳೆಯರು ವಿಡಿಯೋ ಮೂಲಕ ತಿಳಿಸಿದ್ದಾರೆ. ಇದನ್ನು ಟ್ವಿಟರ್‌ನಲ್ಲಿ ನೋಡಿದ ಸುದೀಪ್ ಅವರು ಮನಸಾರೆ ಪ್ರತಿಕ್ರಿಯಿಸಿದ್ದಾರೆ. ‘ಇದು ಮಧುರವಾಗಿದೆ. ನಿಮ್ಮೆಲ್ಲರಿಗೂ ಧನ್ಯವಾದಗಳು’ ಎಂದಿದ್ದಾರೆ ಅಭಿಮಾನಿಗಳ ಪಾಲಿನ ‘ಅಭಿನಯ ಚಕ್ರವರ್ತಿ’.