ಯಾದಗಿರಿ:- ಕಂದಕಕ್ಕೆ ಬಸ್ ಉರುಳಿ ಭಾರೀ ಅನಾಹುತ ತಪ್ಪಿರುವ ಘಟನೆ ಯಾದಗಿರಿಯಲ್ಲಿ ಜರುಗಿದೆ.

Date:

ಯಾದಗಿರಿ:- ಕಂದಕಕ್ಕೆ ಬಸ್ ಉರುಳಿ ಭಾರೀ ಅನಾಹುತ ತಪ್ಪಿರುವ ಘಟನೆ ಯಾದಗಿರಿಯಲ್ಲಿ ಜರುಗಿದೆ.

ಜಿಲ್ಲೆಯ ವಡಗೇರಾ ಪಟ್ಟಣದ ಹೊರವಲಯದ ಆದಿ ಬಸವಣ್ಣ ದೇವಸ್ಥಾನದ ಹತ್ತಿರ ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಗೆ ಸೇರಿದ ಬಸ್ಸು ತಾಲೂಕಿನ ಸಂಗಮ ದಿಂದ ಯಾದಗಿರಿ ನಗರಕ್ಕೆ ತೆರಳುತ್ತಿರುವಾಗ ಬೆಳಗ್ಗೆ 9. ಗಂಟೆ ಸುಮಾರಿಗೆ ಕಂದಕಕ್ಕೆ ಬಸ್ಸು ಉರುಳಿ ಬಿದ್ದಿದೆ. ಅದೃಷ್ಟಾವಶಾತ್ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಈ ಘಟನೆಗೆ ಪ್ರಮುಖ ಕಾರಣ ಬೈಕ್ ಸವಾರನೊಬ್ಬ ಬಸ್ಸನ್ನು ಹಿಂದಿಕ್ಕಿ ಮುಂದೆ ಹೋಗಿ ಆಯತಪ್ಪಿ ರಸ್ತೆಯ ಮೇಲೆ ಉರುಳಿ ಬಿದ್ದಿದ್ದಾನೆ.

ಬೈಕ್ ಸವಾರನನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕಕ್ಕೆ ಬಸ್ಸು ಉರುಳಿದೆ, ಈ ಬಸ್ಸಿನಲ್ಲಿ ಸುಮಾರು 50 ಕ್ಕೂ ಹೆಚ್ಚು ಪ್ರಯಾಣಿಕರು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು.

ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪಟ್ಟಣದ ಸಾರ್ವಜನಿಕರು ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಸಹಾಯದಿಂದ ಆಂಬುಲೆನ್ಸ್ ಮೂಲಕ ಅವರನ್ನು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜಗನ್ನಾಥ್ ರೆಡ್ಡಿ ಮಾತನಾಡಿ ಪ್ರಯಾಣಿಕರು ಮತ್ತು ಚಿಕ್ಕ ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ನಮ್ಮ ಆರೋಗ್ಯ ಕೇಂದ್ರದಲ್ಲಿ ಸೂಕ್ತ ಚಿಕಿತ್ಸೆ ವ್ಯವಸ್ಥೆಯನ್ನು ನೀಡಲಾಗುತ್ತಿದೆ. ಉಳಿದ 7 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಯಾರು ಭಯಪಡುವ ಅವಶ್ಯಕತೆ ಇಲ್ಲ ಎಂದು ಅವರು ತಿಳಿಸಿದ್ದಾರೆ .

ಈ ಘಟನೆ ಕುರಿತು ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ..

Share post:

Subscribe

spot_imgspot_img

Popular

More like this
Related

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ...

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ ನವದೆಹಲಿ: ಕನ್ನಡ ರಾಜ್ಯೋತ್ಸವ...

ಹಾಲು-ನೀರು ಸರಿಯಾದರೂ ಟೀ ರುಚಿಯಾಗಿಲ್ಲವಾ? ಹಾಗಿದ್ರೆ ತಪ್ಪು ಇಲ್ಲಿದೆ ನೋಡಿ!

ಹಾಲು-ನೀರು ಸರಿಯಾದರೂ ಟೀ ರುಚಿಯಾಗಿಲ್ಲವಾ? ಹಾಗಿದ್ರೆ ತಪ್ಪು ಇಲ್ಲಿದೆ ನೋಡಿ! ಭಾರತೀಯರ ಜೀವನದಲ್ಲಿ...

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ...