ಯಾರು ಗೊತ್ತಾ ರಶ್ಮಿಕಾ ಮಂದಣ್ಣ ಫೇವರಿಟ್ ಕ್ರಿಕೆಟರ್?

Date:

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಧ್ಯದಲ್ಲಿಯೇ ಮೊಟಕುಗೊಂಡಿದೆ. ಟೂರ್ನಿಯಲ್ಲಿ ಇದುವರೆಗೂ 29 ಪಂದ್ಯಗಳು ಯಶಸ್ವಿಯಾಗಿ ನಡೆದಿದ್ದು ಕೆಲ ಆಟಗಾರರಲ್ಲಿ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡ ಕಾರಣ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಮುಂದೂಡಿದ್ದು, ಸೆಪ್ಟೆಂಬರ್ ತಿಂಗಳಿನಲ್ಲಿ ಉಳಿದ 31 ಪಂದ್ಯಗಳು ಇಂಗ್ಲೆಂಡ್ ಅಥವಾ ಯುಎಇಯಲ್ಲಿ ನಡೆಯಲಿವೆ ಎಂಬ ಸುದ್ದಿ ಹರಿದಾಡುತ್ತಿದೆ.

 

ಪ್ರಸ್ತುತ ಐಪಿಎಲ್ ಟೂರ್ನಿಯ ಕುರಿತು ಇತ್ತೀಚೆಗಷ್ಟೇ ನಟಿ ರಶ್ಮಿಕಾ ಮಂದಣ್ಣ ಮಾತನಾಡಿದ್ದರು. ಇನ್ಸ್ಟಾಗ್ರಾಂ ಲೈವ್ ವೇಳೆ ಅಭಿಮಾನಿಯೊಬ್ಬ ನಿಮ್ಮ ನೆಚ್ಚಿನ ಐಪಿಎಲ್ ತಂಡ ಯಾವುದು ಎಂದು ಕೇಳಿದಾಗ ನಟಿ ರಶ್ಮಿಕಾ ಈ ಸಲ ಕಪ್ ನಮ್ದೇ ಎಂದು ಹೇಳುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ನೆಚ್ಚಿನ ತಂಡ ಎಂಬುದನ್ನು ತಿಳಿಸಿದ್ದರು. ರಶ್ಮಿಕಾ ಮಂದಣ್ಣ ನೀಡಿದ್ದ ಈ ಉತ್ತರ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ನೆಚ್ಚಿನ ಐಪಿಎಲ್ ತಂಡ ಎಂದು ಹೆಸರಿಸಿದ್ದ ರಶ್ಮಿಕಾ ಮಂದಣ್ಣ ಅದೇ ಲೈವ್‌ನಲ್ಲಿ ತನ್ನ ನೆಚ್ಚಿನ ಆಟಗಾರನನ್ನೂ ಸಹ ಹೆಸರಿಸಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ತನ್ನ ನೆಚ್ಚಿನ ಆಟಗಾರ ಎಂದು ರಶ್ಮಿಕಾ ಮಂದಣ್ಣ ತಿಳಿಸಿದ್ದರು. ಧೋನಿಯ ನಾಯಕತ್ವ, ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್ ಬಲು ಇಷ್ಟ ಎಂದು ಹೇಳಿದ ರಶ್ಮಿಕಾ ಮಂದಣ್ಣ ಧೋನಿ ನನ್ನ ಹೀರೋ ಎಂದು ತಿಳಿಸಿದ್ದಾರೆ.

 

ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಎರಡೂ ತಂಡಗಳು ಸಹ ಉತ್ತಮ ಪ್ರದರ್ಶನವನ್ನು ನೀಡಿದ್ದು ಅಂಕಪಟ್ಟಿಯ ಟಾಪ್ 4ರಲ್ಲಿ ಸ್ಥಾನ ಪಡೆದುಕೊಳ್ಳುವುದರ ಮೂಲಕ ಕಪ್ ಗೆಲ್ಲುವ ರೇಸ್‌ನಲ್ಲಿವೆ.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...