ಮುಂದಿನ ತಿಂಗಳಿನಿಂದ ನಾನು ಜಿಲ್ಲಾ ಪ್ರವಾಸ ಮಾಡುತ್ತೇನೆ. ಕುಮಾರಸ್ವಾಮಿ ಕೂಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಒಳ್ಳೆ ಕೆಲಸ ಮಾಡಿದರೂ ಬೆಂಬಲ ಕೊಡಲಿಲ್ಲ. ಹೀಗಾಗಿ ನಾವು ಮತ್ತೆ ಆ ತಪ್ಪನ್ನು ಮಾಡುವುದಿಲ್ಲ. ನಾವು ಏಕಾಂಗಿಯಾಗಿ ಎಲ್ಲಾ ಚುನಾವಣೆಗಳನ್ನು ಎದುರಿಸೋಣ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಮಾಡಿದ ಕೆಲಸಗಳನ್ನು ಮನೆ ಮನೆಗೆ ತಲುಪಿಸಿ. ಮಧ್ಯಂತರ ಚುನಾವಣೆ ನಡೆದರೆ ಜೆಡಿಎಸ್ ಗೆ ಗೆಲುವು ನಿಶ್ಚಿತ. ಯಾರು ಪಕ್ಷ ಬಿಟ್ಟು ಹೋದರು ನಾನು ತಲೆಕೆಡಿಸಿಕೊಳ್ಳುವುದಿಲ್ಲ. ತುಂಬಾ ಜನರು ಪಕ್ಷವನ್ನು ಬಿಟ್ಟು ಹೋಗಿದ್ದಾರೆ. ಪಕ್ಷದಿಂದಲೇ ಬೆಳೆದು ಪಕ್ಷದ ವಿರುದ್ಧ ಮಾತನಾಡುತ್ತಿದ್ದಾರೆ. ಇದಕ್ಕೆಲ್ಲ ನಾನು ಹೆದರುವುದಿಲ್ಲ. ನನಗೆ ಪಕ್ಷ ಕಟ್ಟುವುದು ಗೊತ್ತು, ಕಾರ್ಯಕರ್ತರು ಜೊತೆಗಿದ್ದರೆ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.