ಯಾರೇ ಅಡ್ಡಿ ಬಂದರೂ ಮೇಕೆದಾಟು ಯೋಜನೆ ನಿಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನರುಚ್ಚರಿಸಿದ್ದಾರೆ. ಕರ್ನಾಟಕದ ಕಾವೇರಿ ನದಿಗೆ ಮೇಕೆದಾಟು ಬಳಿ ಡ್ಯಾಂ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ತಮಿಳುನಾಡು ಸರ್ಕಾರ ವಿರೋಧಿಸುತ್ತಿದೆ.
ಇನ್ನು ಈ ವಿಚಾರಕ್ಕೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ತಮಿಳುನಾಡು ಬಿಜೆಪಿ ಘಟಕ ಸರ್ಕಾರದ ಪರ ನಿಲ್ಲುತ್ತೇನೆ ಎಂದು ಈ ಹಿಂದೆಯೇ ತಿಳಿಸಿದ್ದರು. ಆದ್ರೆ ಈಗ ಮೇಕೆದಾಟು ಯೋಜನೆ ವಿರೋಧಿಸಿ ಕೆ.ಅಣ್ಣಾಮಲೈ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಅಣ್ಣಾಮಲೈ ವಿಚಾರ ಕುರಿತು ಪರೋಕ್ಷವಾಗಿ ಮಾತನಾಡಿರುವ ಬಸವರಾಜ ಬೊಮ್ಮಾಯಿ ಯಾರೇ ವಿರೋಧಿಸಿದರೂ ಡ್ಯಾಂ ನಿರ್ಮಾಣವಾಗಿಯೇ ಆಗುತ್ತದೆ ಎಂದಿದ್ದಾರೆ.
ಕುಡಿಯುವ ನೀರಿನ ಉದ್ದೇಶದಿಂದ ರೂಪಿಸಿರುವ ಮೇಕೆದಾಟು ಯೋಜನೆ ನಿಲ್ಲುವುದಿಲ್ಲ. ಯೋಜನೆ ಜಾರಿ ಸಂಬಂಧ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನ್ಯಾಯ ಒದಗಿಸುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಈ ಮೊದಲೇ ಹೇಳಿದ್ದರು