ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬಿ.ಎಸ್.ಯಡಿಯೂರಪ್ಪನವರೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೇಂದ್ರ ಬಿಜೆಪಿ ವರಿಷ್ಠರು ಸ್ಪಷ್ಟಪಡಿಸಿರುವುದರಿಂದ ನಾಯಕತ್ವ ವಿಷಯದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಸ್ಪಷ್ಟಪಡಿಸಿದ್ದಾರೆ.
ಯಡಿಯೂರಪ್ಪನವರ ನಿವಾಸ ದವಳಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಅವರು, ನಾಯಕತ್ವ ವಿಷಯದಲ್ಲಿ ಬಿಜೆಪಿಯೊಳಗೆ ಇಲ್ಲವೇ ಹೈಕಮಾಂಡ್ಮಟ್ಟದಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ.
ಯಡಿಯೂರಪ್ಪನವರು ಮುಖ್ಯಮಂತ್ರಿಯಾಗುವುದು ನೂರನೂರರಷ್ಟು ಖಚಿತ. ಊಹಾಪೋಗಳಿಗೆ ಯಾರೊಬ್ಬರೂ ತಲೆಕೆಡಿಸಿಕೊಳ್ಳಬಾರದು ಎಂದು ಮನವಿ ಮಾಡಿದರು. ಕೇಂದ್ರ ವರಿಷ್ಠರೇ ಸ್ಪಷ್ಟನೆ ಕೊಟ್ಟಿರುವುದರಿಂದ ನಮ್ಮಲ್ಲಿ ಗೊಂದಲಗಳಿಲ್ಲ.