No menu items!
18 C
Munich
Friday, July 3, 2026

ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವ ಯೋಚನೆ ಇಲ್ಲ !

Must read

ಮೈಸೂರು: ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಈ ಸಂಬಂಧ ಮಾತನಾಡಿದ ಅವರು, ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಮುಂದುವರಿಯಲಿವೆ. ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ, ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂಬ ನ್ಯಾಯಾಲಯದ ಆದೇಶದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಹಾಗೂ ಜೆಡಿಎಸ್ ಈ ಪ್ರಕರಣದಲ್ಲಿ ಕಾಂಗ್ರೆಸ್‍ನದ್ದು ರಾಜಕೀಯ ಷಡ್ಯಂತ್ರ ಎಂದು ಆರೋಪಿಸುತ್ತಿದ್ದಾರೆ. ಆದರೆ, ದೂರು ನೀಡಿರುವವರು ಯಾರು? ಸರ್ಕಾರವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷ ದ್ವೇಷದ ರಾಜಕಾರಣ ಮಾಡುವುದಿಲ್ಲ. ಕಾನೂನು ರೀತಿ ಕೆಲಸ ಮಾಡುವ ಪೊಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಒಪ್ಪಿ ಅದರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದರು.

- Advertisement -spot_img

More articles

- Advertisement -spot_img

Latest article