ಮೈಸೂರು: ಆಂಧ್ರಪ್ರದೇಶದವರು ನಮ್ಮ ರಾಜ್ಯದ ಆನೆಗಳನ್ನು ಕೇಳಿದ್ದಾರೆ ಅಷ್ಟೇ. ಆದರೆ ಯಾವುದೇ ಕಾರಣಕ್ಕೂ ದಸರಾ ಆನೆಗಳನ್ನು ಕಳುಹಿಸಿಕೊಡಲು ಆಗಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಆಂಧ್ರಪ್ರದೇಶದವರು ನಮ್ಮ ರಾಜ್ಯದ ಆನೆಗಳನ್ನು ಕೇಳಿದ್ದಾರೆ ಅಷ್ಟೇ. ಆದರೆ ಯಾವುದೇ ಕಾರಣಕ್ಕೂ ದಸರಾ ಆನೆಗಳನ್ನು ಕಳುಹಿಸಿಕೊಡಲು ಆಗಲ್ಲ. ದಸರಾ ಆನೆಗಳು ನಮ್ಮ ಅಸ್ಮಿತೆ. ಇತರೆ ಆನೆಗಳನ್ನು ಕಳುಹಿಸಿಕೊಡುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದರು.
ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ವಿಚಾರವಾಗಿ ಮಾತನಾಡಿ, ರೋಪ್ ವೇ ನಿರ್ಮಾಣ ವಿಚಾರದಲ್ಲಿ ಆತಂಕ ಪಡುವ ಅಗತ್ಯವಿಲ್ಲ. ಪರಿಸರ ಸಂರಕ್ಷಣೆ ಜೊತೆ ಅಭಿವೃದ್ಧಿ ಸಹ ಆಗಬೇಕು ಎಂದ ಸಚಿವರು, ಅರ್ಜುನ ಆನೆ ಮೃತಪಟ್ಟ ಸ್ಥಳ ಹಾಗೂ ಬಳ್ಳೆ ಅರಣ್ಯ ಶಿಬಿರದಲ್ಲಿ ಸರ್ಕಾರವೇ ಸ್ಮಾರಕ ನಿರ್ಮಿಸಲಿದೆ ಎಂದು ತಿಳಿಸಿದರು.
ಯಾವುದೇ ಕಾರಣಕ್ಕೂ ದಸರಾ ಆನೆಗಳನ್ನು ಕಳುಹಿಸಿಕೊಡಲು ಆಗಲ್ಲ !
Date: