ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಣ ಚುನಾವಣಾ ರಾಜಕಾರಣಕ್ಕೆ, ಮದ್ಯ ಖರೀದಿಗೆ ಹೋಗಿರುವುದು ಗೊತ್ತಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣದ ಹಣ ಚುನಾವಣಾ ರಾಜಕಾರಣಕ್ಕೆ, ಮದ್ಯ ಖರೀದಿಗೆ ಹೋಗಿರುವುದು ಗೊತ್ತಾಗಿದೆ. ಈ ಬಗ್ಗೆ ಪೂರ್ಣ ತನಿಖೆಯಾದರೆ ಸಿಎಂ ರಾಜಿನಾಮೆ ಕೊಡಬೇಕಾಗುತ್ತದೆ ಎಂದು ಬಿಜೆಪಿಯ ಅವಧಿಯಲ್ಲಿ 21 ಹಗರಣ ಆಗಿದೆ ಎಂದು ಆರೋಪಿಸಿದ್ದಾರೆ.
ಬಹಳ ಕಷ್ಟ ಪಟ್ಟು ಬಿಜೆಪಿಯ ಅವಧಿಯಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಈಗ ಕಣ್ಣು ತೆರೆದು ನೋಡುತ್ತಿದ್ದಾರೆ. ಅವರು ಅಧಿಕಾರದಲ್ಲಿ ಇದ್ದಾರೆ. ಯಾವುದೇ ತನಿಖೆ ನಡೆಸಲಿ ನಾವು ಎದುರಿಸಲು ಸಿದ್ಧರಿದ್ದೇವೆ. ಆದರೆ, ತನಿಖೆ ಹೆಸರಲ್ಲಿ ಅಧಿಕಾರ ದುರ್ಬಳಕೆ ಆಗಬಾರದು, ಅವರು ಮಾಡಿರುವ ಆರೋಪಕ್ಕೆ ದಾಖಲೆ ನೀಡಬೇಕಿತ್ತು ಎಂದು ಆಗ್ರಹಿಸಿದರು.
ಯಾವುದೇ ತನಿಖೆ ನಡೆಸಲಿ ನಾವು ಎದುರಿಸಲು ಸಿದ್ಧರಿದ್ದೇವೆ: ಬಸವರಾಜ ಬೊಮ್ಮಾಯಿ
Date: