ಯುದ್ಧ ಸ್ಮಾರಕಕ್ಕೆ ತೆರಳಿ ಗೌರವ ಸಲ್ಲಿಸಿದ ಪ್ರಧಾನಿ..!

Date:

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಮಡಿದ ವೀರರಿಗೆ ಗೌರವ ಸಲ್ಲಿಸಿದರು. 75ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು. ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮೋದಿ ಮತ್ತು ಇತರ ಗಣ್ಯರು ಮೆರವಣಿಗೆಯನ್ನು ವೀಕ್ಷಿಸಲು ಕರ್ತವ್ಯ ಪಥದಲ್ಲಿನ ವೇದಿಕೆಗೆ ತೆರಳಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಅವರ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರ ಆಗಮಿಸಿದ ವೇಳೆ ರಾಷ್ಟ್ರಪತಿಗಳ ಅಂಗರಕ್ಷಕರು ಬೆಂಗಾವಲು ನೀಡಿದ್ದಾರೆ. ರಾಷ್ಟ್ರಪತಿಗಳ ಅಂಗರಕ್ಷಕ ಭಾರತೀಯ ಸೇನೆಯ ಅತ್ಯಂತ ಹಿರಿಯ ರೆಜಿಮೆಂಟ್ ಆಗಿದೆ. ಅಂಗರಕ್ಷಕ್ 1773 ರಲ್ಲಿ ಸ್ಥಾಪನೆಯಾದಾಗಿನಿಂದ 250 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದೆ. ಇನ್ನು ಸುಮಾರು 40 ವರ್ಷಗಳ ಬಳಿಕ‌ ಈ ಬಾರಿ ಕರ್ತವ್ಯ ಪಥದಲ್ಲಿ ರಾಷ್ಟ್ರಪತಿಯವರು ಸಾರೋಟಿನಲ್ಲಿ ಬಂದಿಳಿದಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...