ಯುವಕನನ್ನು ಕೊಲೆ ಮಾಡಿ ಎಸ್ಕೇಪ್: ಬಂಧಿಸಲು ಹೋದ ಖಾಕಿ ಮೇಲೆ ಅಟ್ಯಾಕ್, ಪೊಲೀಸರಿಂದ ಗುಂಡೇಟು!
ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ.
ಅಭಿಷೇಕ್, ವಿನೋದ್, ಯಲ್ಲಪ್ಪ ಗಾಯಾಳುಗಳು ಎಂದು ಗುರುತಿಸಲಾಗಿದೆ. ತಡರಾತ್ರಿ ಹುಬ್ಬಳ್ಳಿಯ ಉಣಕಲ್ ಕೆರೆ ಬಳಿ ಆಕಾಶ್ ಕೊಲೆಯಾಗಿತ್ತು. ಈ ಕೊಲೆಯಲ್ಲಿ ಭಾಗಿಯಾಗಿರುವ ಮೂವರನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾದರು. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು 9 ಸುತ್ತು ಗುಂಡು ಹಾರಿಸಿದರು. 4 ಸುತ್ತು ಗಾಳಿಯಲ್ಲಿ , 5 ಸುತ್ತು ಗುಂಡುಗಳನ್ನು ಆರೋಪಿಗಳ ಕಾಲಿಗೆ ಹೊಡೆದರು. ಬಳಿಕ, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಘಟನೆಯಲ್ಲಿ ಇನ್ಸ್ಪೆಕ್ಟರ್ಗಳಾದ ಶ್ರೀಮಂತ ಹುಣಸಿಕಟ್ಟಿ, ಸುನೀಲ್ ಮತ್ತು ಪೇದೆಗಳಾದ ಮುತ್ತು ಲಮಾಣಿ, ಶರಣಗೌಡ ಲಮಾಣಿ ಎಂಬುವರಿಗೆ ಗಾಯವಾಗಿದೆ. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಆಕಾಶ್ ಕೊಲೆ ಹಿಂದೆ ಹಳೇ ದ್ವೇಷ, ಹವಾ ಸೃಷ್ಟಿ ಮಾಡುವ ಉದ್ದೇಶವಿದೆ ಎಂದು ತಿಳಿದುಬಂದಿದೆ
ಪ್ರಕರಣ ಸಂಬಂಧ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.